ಗೆಜ್ಜೆಗಿರಿ ನಂದನ ಶಿಲಾನ್ಯಾಸ ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು,ಜ.15: ತುಳುನಾಡಿನ ಅವಳಿ ವೀರರಾದ ಕೋಟಿ ಚೆನ್ನಯರ ಮೂಲಸ್ಥಾನವಾದ ಪಡುಮಲೆ ಗೆಜ್ಜೆಗಿರಿ ನಂದನ ಬಿತ್ತ್‌ಲ್‌ನಲ್ಲಿ ಫೆಬ್ರವರಿ 19ರಂದು ನಡೆಯಲಿರುವ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಭಾನುವಾರ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಭಾನುವಾರ ನಡೆಯಿತು.
ಕೇರಳದ ವರ್ಕಳ ಶಿವಗಿರಿ ಮಠದ ಶ್ರಿ ಸತ್ಯಾನಂದ ಸ್ವಾಮೀಜಿ ಅವರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲು ಅಧ್ಯಕ್ಷತೆ ವಹಿಸಿದ್ದರು. ದೇಯಿ ಬೈದ್ಯೆತಿ- ಕೋಟಿ ಚೆನ್ನಯ ಮೂಲಸ್ಥಾನ ಜೀರ್ಣೋದ್ಧಾರ ತಾಲೂಕು ಸೇವಾ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು,
ಗೆಜ್ಜೆಗಿರಿ ನಂದನ ಬಿತ್ತ್‌ಲ್‌ನ ಅನುವಂಶೀಯ ಮೊಕ್ತೇಸರ ಶ್ರೀಧರ ಪೂಜಾರಿ, ತಾಲೂಕು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಕೇಪುಳು ಬಾಳಪ್ಪ ಪೂಜಾರಿ, ತಾಲೂಕು ಬಿಲ್ಲವ ಸಂಘದ ಪದಾಧಿಕಾರಿಗಳು, ಸದಸ್ಯರು, ಮಹಿಳಾ ವೇದಿಕೆ, ಯುವವಾಹಿನಿ, ವಿದ್ಯಾರ್ಥಿ ವೇದಿಕೆ ಪದಾಧಿಕಾರಿಗಳು ಮತ್ತು ಸದಸ್ಯರು, ದೇಯಿ ಬೈದ್ಯೆತಿ- ಕೋಟಿ ಚೆನ್ನಯ ಮೂಲಸ್ಥಾನ ಜೀರ್ಣೋದ್ಧಾರ ತಾಲೂಕು ಸೇವಾ ಸಮಿತಿಯ ಪದಾಧಿಕಾರಿಗಳು, ವಲಯ ಸಂಚಾಲಕರು, ಗ್ರಾಮ ಸಮಿತಿ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
ಗೆಜ್ಜೆಗಿರಿ ನಂದನ ಬಿತ್ತ್‌ಲ್ ಪುತ್ತೂರು ತಾಲೂಕು ಸಮಿತಿಯ ಕಾರ್ಯದರ್ಶಿ ಶಶಿಧರ್ ಕಿನ್ನಿ ಮಜಲ್ ಸ್ವಾಗತಿಸಿದರು. ಸುಧಾಕರ ಸುವರ್ಣ ಪ್ರಾಸ್ತಾವಿಕ ಮಾತುಗಳನ್ನಾಡಿ, ಕಾರ್ಯಕ್ರಮ ನಿರ್ವಹಿಸಿದರು. ಉಲ್ಲಾಸ್ ಕೋಟ್ಯಾನ್ ವಂದಿಸಿದರು.