ಅಪಘಾತ: ಗಾಯಾಳು ಮೃತ್ಯು
Update: 2017-01-15 21:12 IST
ಶಂಕರನಾರಾಯಣ, ಜ.15: ಸಿದ್ದಾಪುರ ಗ್ರಾಮದ ಜನ್ಸಾಲೆ ಎಂಬಲ್ಲಿ ಜ.11ರಂದು ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಪಾದಾಚಾರಿ ಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರನ್ನು ಭಾಸ್ಕರ ಜೋಗಿ ಎಂದು ಗುರುತಿಸಲಾಗಿದೆ. ಕುಂದಾಪುರ ಕಡೆಯಿಂದ ಸಿದ್ದಾಪುರ ಕಡೆಗೆ ಹೋಗುತ್ತಿದ್ದ ಬೈಕ್ ರಸ್ತೆಯ ಬದಿಯಲ್ಲಿ ನಿಂತುಕೊಂಡಿದ್ದ ಭಾಸ್ಕರ ಜೋಗಿ ಎಂಬವರಿಗೆ ಢಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭಾಸ್ಕರ ಜೋಗಿಯನ್ನು ಡಿಸ್ಚಾರ್ಜ್ ಮಾಡಿ ಮನೆಗೆ ಕರೆತರ ಲಾಗಿತ್ತು. ಜ.14ರಂದು ಅವರು ಮನೆಯಲ್ಲಿ ಮೃತಪಟ್ಟರು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.