×
Ad

ಮಂಚಿ: ಹೂತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

Update: 2017-01-15 21:57 IST

ಬಂಟ್ವಾಳ, ಜ. 15: ತಾಲೂಕಿನ ಮಂಚಿ ಗ್ರಾಮದ ಕಡಂತಬೆಟ್ಟು ಎಂಬಲ್ಲಿನ ಕೆಂಪು ಕಲ್ಲಿನ ಕೋರೆಯಲ್ಲಿ ರವಿವಾರ ಸಂಜೆ ಹೂತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದೆ.

ಮೃತದೇಹ ಪತ್ತೆಯಾದ ಕಡಂತಬೆಟ್ಟು ಪ್ರದೇಶವು ಕೊಳ್ನಾಡು ಮತ್ತು ಇರಾ ಗ್ರಾಮದ ಗಡಿ ಭಾಗವಾಗಿದ್ದು ಕಾಡು ಪ್ರದೇಶವಾಗಿದೆ. ಇಂದು ಸಂಜೆ ಸ್ಥಳೀಯ ನಿವಾಸಿಯೊಬ್ಬರು ಗುಡ್ಡದಲ್ಲಿ ಆಡು ಮೇಯಿಸಲು ತೆರಳಿದ್ದ ಸಂದರ್ಭದಲ್ಲಿ ಇಲ್ಲಿನ ಕೆಂಪು ಕಲ್ಲಿನ ಕೋರೆಯಲ್ಲಿ ಹೂತ ಸ್ಥಿತಿಯಲ್ಲಿದ್ದ ಮೃತದೇಹವನ್ನು ನಾಯಿಗಳು ಎಳೆದು ತಿನ್ನುತ್ತಿರುವುದನ್ನು ಗಮನಿಸಿದ ಅವರು, ಈ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು ಕೂಡಲೇ ಬಂಟ್ವಾಳ ಗ್ರಾಮಾಂತರ ಠಾಣೆ ಎಸ್ಸೈ ಎ.ಕೆ.ರಕ್ಷಿತ್ ಗೌಡ ಹಾಗೂ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಸುಮಾರು ಮೂರು ತಿಂಗಳ ಹಿಂದೆ ಮೃತ ದೇಹವನ್ನು ಹೂತಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಮೃತದೇಹದ ತಲೆ ಬುರುಡೆ ಮಾತ್ರ ಹೊರಕ್ಕೆ ಕಾಣುತ್ತಿದ್ದು, ರಾತ್ರಿಯಾಗಿದ್ದರಿಂದ ಮೃತದೇಹವನ್ನು ಮೇಲಕ್ಕೆತ್ತದೆ ನಾಳೆ ಬೆಳಗ್ಗೆ ಹಿರಿಯ ಪೊಲೀಸರ ಸಮ್ಮುಖದಲ್ಲಿ ಮೃತದೇವನ್ನು ಮೇಲೆಕ್ಕತ್ತಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News