ಆರ್ಚ್ ಬಿಷಪ್ ಬರ್ನಾಡ್ ಮೊರಾಸ್‌ರಿಂದ ಮಾನವೀಯತೆಯ ಸಂದೇಶ

Update: 2017-01-16 04:10 GMT

ಬೆಂಗಳೂರು, ಜ. 15: ಇಲ್ಲಿನ ವಿವೇಶಕ ನಗರದಲ್ಲಿನ ಕ್ಯಾಥೋಲಿಕ್ ಚರ್ಚ್‌ನಲ್ಲಿ ಆರ್ಚ್ ಬಿಷಪ್ ಮೊರಾಸ್ ಸೇರಿದಂತೆ ವಿವಿಧ ಧರ್ಮಗಳ ಅನುಯಾಯಿಗಳಿಗೆ ಮಾನವೀಯತೆ ಸಂದೇಶವನ್ನು ಬೋಧಿಸಿದರು.

ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಮಾಧಕ ವಸ್ತುಗಳ ಸೇವನೆಯಿಂದ ಯುವ ಜನತೆ ಹಾದಿ ತಪ್ಪುತ್ತಿದ್ದಾರೆ. ಹೀಗಾಗಿ ಯುವ ಜನತೆ ಆಧ್ಯಾತ್ಮಿಕ ವೌಲ್ಯಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ವೌಲ್ಯಯುತವಾದ ಜೀವನವನ್ನು ನಡೆಸಬೇಕೆಂದು ಸಂದೇಶ ನೀಡಿದರು.

ಜಗತ್ತಿನಾದ್ಯಂತ ಮಾಹಿತಿ ತಂತ್ರಜ್ಞಾನ ಕ್ಷಿಪ್ರಗತಿಯಲ್ಲಿ ಬೆಳೆಯುತ್ತದೆ. ಇದನ್ನು ಮಾನವನ ಬೆಳವಣಿಗೆಗೆ ಪೂರಕವಾಗಿ ಬಳಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ಯುವ ಜನತೆಯನ್ನು ರೂಪಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್.ರಮೇಶ್ ಕುಮಾರ್, ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಹ್ಯಾರಿಸ್, ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ ಮೇಯರ್ ಜಿ.ಪದ್ಮಾವತಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News