×
Ad

ತಮಿಳುನಾಡಿನಲ್ಲಿ ಸುಪ್ರೀಂ ಆದೇಶ ಧಿಕ್ಕರಿಸಿ ಜಲ್ಲಿಕಟ್ಟು

Update: 2017-01-16 13:47 IST

ಚೆನ್ನೈ,ಜ.16:ತಮಿಳುನಾಡಿನಲ್ಲಿ ಸಾಂಪ್ರದಾಯಿಕ ಜಲ್ಲಿಕಟ್ಟು ಗೂಳಿ ಓಟಕ್ಕೆ ಸುಪ್ರೀಂಕೋರ್ಟ್ ಕಟ್ಟುನಿಟ್ಟಿನ ನಿಷೇಧ ಹೇರಿದ್ದರೂ  ನ್ಯಾಯಾಲಯದ ಆದೇಶ ಧಿಕ್ಕರಿಸಿ  ಜಲ್ಲಿಕಟ್ಟು ಆಚರಣೆಗೆ ಯತ್ನಿಸಿದ  ಸುಮಾರು 400ಕ್ಕೂ ಅಧಿಕ ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿ ಜನರು ಮನೆ ಮನೆಗಳಲ್ಲಿ ಕಪ್ಪುಬಾವುಟ ಪ್ರದರ್ಶಿಸುವ ಮೂಲಕ ಜಲ್ಲಿಕಟ್ಟು ಆಚರಣೆಗೆ ಅವಕಾಶ ನಿರಾಕರಿಸಿದ ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸರಕಾರದ ವಿರುದ್ದ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಂಜಾವೂರ್, ಮಧುರೈ ಸೇರಿದಂತೆ ತಮಿಳುನಾಡಿನ ವಿವಿಧ ಭಾಗಗಳಲ್ಲಿ ಜಲ್ಲಿಕಟ್ಟು ಆಚರಣೆಗೆ ಯತ್ನಿಸಿದ ಜನರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News