ಬೆಂಗ್ರೆ: ಯುನಿವೆಫ್ ವತಿಯಿಂದ ಪ್ರವಾದಿ ಅಭಿಯಾನ
Update: 2017-01-16 16:15 IST
“ಭಾರತದಲ್ಲಿ ನಾಗರಿಕ ಕಾನೂನು ಹಾಗೂ ಸಾಮಾಜಿಕ ನ್ಯಾಯ ಮತ್ತು ಪ್ರವಾದಿ ಮುಹಮ್ಮದ್(ಸ)” ಎಂಬ ವಿಷಯದಲ್ಲಿ ಯುನಿವೆಫ್ ಕರ್ನಾಟಕ ಆಯೋಜಿಸಿರುವ “ಅರಿಯಿರಿ ಮನುಕುಲದ ಪ್ರವಾದಿಯನ್ನು” ಎಂಬ ಅಭಿಯಾನ ಬೆಂಗ್ರೆ ಕಡವಿನ ಬಳಿ ನಡೆಯಿತು.
ಯುನಿವೆಫ್ ಕರ್ನಾಟಕ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿಯವರು ಮಾತನಾಡಿ, ಇಂದು ಪ್ರಜಾಪ್ರಭುತ್ವ ದೇಶದಲ್ಲಿ ಮುಸ್ಲಿಮರ ಹಕ್ಕುಗಳನ್ನು ಕಸಿಯಲಾಗುತ್ತಿದೆ. ಶರೀಅತ್‌ನ ಮೇಲಿನ ಸರಕಾರದ ಹಸ್ತಕ್ಷೇಪವನ್ನು ದೇಶದ ಮುಸ್ಲಿಮರು ಖಂಡಿತ ಸಹಿಸಲಾರರು ಎಂದು ಹೇಳಿದರು.
ಕಾರ್ಯಕ್ರಮ ಸಂಚಾಲಕ ಸಲೀಮ್ ಮಲಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ರಾಜ್ಯ ಸಮಿತಿ ಸದಸ್ಯ ಅಬ್ದುಲ್ಲಾ ಪಾರೆ ಮತ್ತು ಬೆಂಗ್ರೆ ಸಂಚಾಲಕ ಇ್ರಾಝ್ ಹಸನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಜ್ಯ ಸಮಿತಿ ಸದಸ್ಯ ನ್ಯಾಯವಾದಿ ಸಿರಾಜುದ್ದೀನ್ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಜಿಲ್ಲಾಧ್ಯಕ್ಷ ಸೈುದ್ದೀನ್ ಕುದ್ರೋಳಿ ಕಿರಾಅತ್ ಪಠಿಸಿದರು.