ಬಂಟ್ವಾಳ ನಿವಾಸಿ ಸೌದಿ ಅರೇಬಿಯಾದಲ್ಲಿ ಮೃತ್ಯು
Update: 2017-01-16 16:57 IST
ಬಂಟ್ವಾಳ, ಜ. 16: ತಾಲೂಕಿನ ಬೋಳಂತ್ತೂರು ಗ್ರಾಮದ ಕಲ್ಪಣೆಯ ವ್ಯಕ್ತಿಯೊಬ್ಬರು ಸೌದಿ ಅರೇಬಿಯಾದಲ್ಲಿ ಇಂದು ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಬೋಳಂತ್ತೂರು ನಿವಾಸಿ ದಿ. ಇಬ್ರಾಹೀಂ ಹಾಜಿ ಎಂಬವರ ಪುತ್ರ ಮುಹಮ್ಮದ್ ಅಶ್ರಫ್(48) ಮೃತಪಟ್ಟವರು. ರವಿವಾರ ತಡ ರಾತ್ರಿ ಊಟ ಮುಗಿಸಿ ಮಲಗಿದ್ದ ಅವರು ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹಲವು ವರ್ಷಗಳಿಂದ ಸೌದಿ ಅರಬೀಯಾದಲ್ಲಿ ಹೌಸ್ ಡ್ರೈವರ್ ವೃತ್ತಿ ಮಾಡುತ್ತಿದ್ದ ಅವರು ಆರು ತಿಂಗಳ ಹಿಂದೆ ಊರಿಗೆ ಬಂದು ಮರಳಿದ್ದರು.
ಮೃತರು ತಾಯಿ, ಪತ್ನಿ, ಮೂವರು ಪುತ್ರಿಯರು, ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.