ನೇತ್ರಾವತಿ ನದಿತೀರದಲ್ಲಿ ಹೆದ್ದಾರಿ ನಿರ್ಮಾಣಕ್ಕಾಗಿ ಶಾಸಕ ಲೋಬೊ ಪರಿಶೀಲನೆ

Update: 2017-01-16 11:50 GMT

ಮಂಗಳೂರು, ಜ.16: ನೇತ್ರಾವತಿ ನದಿತೀರದಿಂದ ಕಣ್ಣೂರು ಮಸೀದಿಯವರೆಗೆ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಪರ್ಯಾಯ ಹೆದ್ದಾರಿ ನಿರ್ಮಾಣಕ್ಕೆ ಶಾಸಕ ಜೆ.ಆರ್.ಲೋಬೊ ಸೋಮವಾರ ದೋಣಿಯಲ್ಲಿ ತೆರಳಿ ಪರಿಶೀಲನೆ ನಡೆಸಿದರು.

ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು 50 ಮೀ. ಅಗಲದ ನಾಲ್ಕು ಪಥದ ಈ ರಸ್ತೆ ನಿರ್ಮಾಣಗೊಂಡಲ್ಲಿ ಪ್ರವಾಸೋದ್ಯಮಕ್ಕೆ ವಿಶೇಷ ಕೊಡುಗೆಯಾಗಲಿದೆ ಎಂದರು.

ಇಲ್ಲಿ ಸರಕಾರಿ ಭೂಮಿ ಎಷ್ಟ್ಟಿದೆ ಮತ್ತು ಎಷ್ಟು ಭೂಮಿಯನ್ನು ನದಿ ಆವರಿಸಿದೆ?. ಎಷ್ಟು ಖಾಸಗಿ ಭೂಮಿಯ ಅಗತ್ಯವಿದೆ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಸ್ತೆ ನಿರ್ಮಾಣಕ್ಕಾಗಿ ಯಾವುದೇ ಮನೆಗಳನ್ನು ತೆರವು ಮಾಡುವುದಿಲ್ಲ. ಮನೆಗಳನ್ನು ತೆರವು ಮಾಡದೆ ಯಾವ ರೀತಿಯಲ್ಲಿ ರಸ್ತೆ ನಿರ್ಮಿಸಲು ಸಾಧ್ಯವೆಂದು ಸರ್ವೇ ಮಾಡಲಾಗುವುದು. ಸಾಧ್ಯವಿದ್ದಷ್ಟು ನದಿಯಲ್ಲಿ ಸೇರಿಕೊಂಡಿರುವ ಭೂಮಿಯನ್ನೇ ಬಳಸಿಕೊಂಡು ರಸ್ತೆ ನಿರ್ಮಿಸಲು ಪ್ರಯತ್ನಿಸುವಂತೆಯೂ ಸೂಚಿಸಲಾಗಿದೆ ಎಂದರು.

ಸರ್ವೇ ಕಾರ್ಯಕ್ಕೆ ರಾಜ್ಯ ಸರಕಾರ 25 ಲಕ್ಷ ರೂ. ನೀಡಿದೆ. ಹೆದ್ದಾರಿ ಮತ್ತು ಲೋಕೋಪಯೋಗಿ ಇಲಾಖೆಗಳು, ಮಹಾನಗರ ಪಾಲಿಕೆ ಹಾಗೂ ಕಂದಾಯ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡುವಂತೆ ತಿಳಿಸಲಾಗಿದೆ. ಈ ಸರ್ವೇ ಕೆಲಸವನ್ನು ಕನಿಷ್ಟ 2 ವಾರಗಳಲ್ಲಿ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ ಎಂದರು.

 ಈ ಸಂದರ್ಭ ಕಾರ್ಪೊರೇಟರ್ ಪ್ರವೀಣ್‌ಚಂದ್ರ ಆಳ್ವ, ಅಶ್ರಫ್ ಬಜಾಲ್, ಪಿಡ್ಲ್ಯುಡಿ ಸುಪರಿಂಟೆಂಡೆಂಟ್ ಇಂಜಿನಿಯರ್ ಕಾಂತಾರಾಜ್, ರಾಷ್ಟ್ರೀಯ ಹೆದ್ದಾರಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಅಬ್ದುರ್ರಹ್ಮಾನ್, ಮನಪಾ ಎಕ್ಸಿಕ್ಯೂಟಿವ್ ಇಂಜಿನಿಯರ್ ಲಿಂಗೇಗೌಡ, ಗಣಪತಿ, ಗ್ರಾಮ ಲೆಕ್ಕಾಧಿಕಾರಿ ಹರೀಶ್, ಕ್ಯಾನಿಟ್ ಡಿಸೋಜ, ಸ್ಟ್ಟಾನ್ಲಿ ಅಲ್ವಾರಿಸ್, ಕೃತಿನ್ ಕುಮಾರ್, ಜೀವನ್, ವಾಲ್ಟರ್ ಲೋಬೊ, ರಫೀಕ್ ಕಣ್ಣೂರು, ಹಮೀದ್ ಕಣ್ಣೂರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News