×
Ad

ಜ.20: ರಾಮಕೃಷ್ಣ ಪ್ರೌಢಶಾಲೆಯ ಸ್ವರ್ಣ ಮಹೋತ್ಸವ ಸಂಭ್ರಮ

Update: 2017-01-16 18:02 IST

ಮಂಗಳೂರು, ಜ.16: ಪಾವೂರು-ಹರೇಕಳ ರಾಮಕೃಷ್ಣ ಅನುದಾನಿತ ಪ್ರೌಢಶಾಲೆಯ ಸ್ವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮವು ಜ.20ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಕಾರ್ಯಕ್ರಮವನ್ನು ಸೂರಜ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಮಂಜುನಾಥ್ ರೇವಣ್ಕರ್ ಉದ್ಘಾಟಿಸಲಿದ್ದಾರೆ ಎಂದು ಮುಖ್ಯ ಶಿಕ್ಷಕ ಕೆ.ರವೀಂದ್ರ ರೈ ತಿಳಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಪಿ.ಎಲ್. ಧರ್ಮ ಹಾಗೂ ತುಳು ಅಕಾಡಮಿಯ ರಿಜಿಸ್ಟ್ರಾರ್ ಬಿ.ಚಂದ್ರಹಾಸ ರೈ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ನಿಟ್ಟೆ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ.ವಿನಯ ಹೆಗ್ಡೆ ಸಭಾಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.

ಸಚಿವ ಯು.ಟಿ. ಖಾದರ್, ಸಂಸದ ನಳಿನ್‌ಕುಮಾರ್ ಕಟೀಲ್, ಬಂಟರ ಯಾನೆ ಆಡವರ ಮಾತೃ ಸಂಘದ ಅಧ್ಯಕ್ಷ ಅಜಿತ್‌ ಕುಮಾರು ರೈ ಮಾಲಾಡಿ, ಆಳ್ವಾಸ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ, ಪೆರ್ಮನ್ನೂರು ಸಂತ ಸೆಬಾಸ್ಟಿಯನ್ ಚರ್ಚ್‌ನ ಧರ್ಮಗುರು ರೆ.ಫಾ. ಜೆ.ಬಿ. ಸಲ್ದಾನ, ಆಲ್ ಖಾದಿಸಾ ಕಾಲೇಜ್ ಆಫ್ ಇಸ್ಲಾಮಿಕ್ ಸೈನ್ಸ್ ಸಂಸ್ಥೆಯ ಪ್ರಾಂಶುಪಾಲ ಹಾಫಿಲ್ ಸುಫಿಯಾನ್ ಸಖಾಫಿ ಮತ್ತಿತರರು ಭಾಗವಹಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸ್ವರ್ಣ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಪ್ರಹ್ಲಾದ ರೈ, ಹರೇಕಳ ವಿದ್ಯಾಸಂಸ್ಥೆಗಳ ಸಂಚಾಲಕ ಜಯರಾಮ ಆಳ್ವ, ಕೋಶಾಧಿಕಾರಿ ಸೋಮಶೇಖರ ಚೌಟ, ಮನೋಜ್ ಕುಮಾರ್ ಹೆಗ್ಡೆ, ಸಂಚಾಲಕ ಮುಹಮ್ಮದ್ ಶಬ್ಬೀರ್ ದೇರಿಕಟ್ಟೆ, ತ್ಯಾಗಂ ಹರೇಕಳ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News