ಗ್ರಾಮೀಣ ಮೀಸಲಾತಿ ದುರುಪಯೋಗ: ಡಾ.ಜಯಪ್ರಕಾಶ್ ಶೆಟ್ಟಿ

Update: 2017-01-16 13:28 GMT

ಉಡುಪಿ, ಜ.16: ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಷ್ಠಾಪಿತವಾಗಿರುವ, ಉಳ್ಳವರ ರೆಸಾರ್ಟ್ ಮಾದರಿ ಶಾಲೆಗಳಿಂದಾಗಿ ಕನ್ನಡ ಮಾಧ್ಯಮ ಶಾಲೆಗಳ ಬಡ ವಿದ್ಯಾರ್ಥಿಗಳಿಗೆ ಗ್ರಾಮೀಣ ಮೀಸಲಾತಿ ಕೈ ತಪ್ಪುತ್ತಿದೆ. ಥೈಲಿಯಲ್ಲಿ ಹಣ ಕೊಟ್ಟು ಈ ಪ್ರತಿಷ್ಠಿತ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ಗಳೊಂದಿಗೆ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳು ಸ್ಪರ್ಧಿಸಲಾಗದೆ ಗ್ರಾಮೀಣ ಮೀಸಲಾತಿಯಿಂದ ವಂಚಿತರಾಗುತ್ತಿದ್ದಾರೆ. ಈ ಬಗ್ಗೆ ಹೆತ್ತವರು ಸರಕಾರಕ್ಕೆ ಪತ್ರವನ್ನು ಬರೆಯುವುದರ ಮೂಲಕ ಚಳುವಳಿಯನ್ನು ಮಾಡ ಬೇಕು ಎಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಸ್ನಾತಕೋತ್ತರ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎಚ್.ಜಯಪ್ರಾಶ್ ಶೆಟ್ಟಿ ಹೇಳಿದ್ದಾರೆ.

ಉದ್ಯಾವರ ಹಿಂದೂ ಹಿರಿಯ ಪ್ರಾಥಮಿಕ ಶಾಲಾ ‘ವರ್ಷದ ಹರ್ಷ’ ನೂರೈವತ್ತಾರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡು ತ್ತಿದ್ದರು. ಇಂದು ಪ್ರತಿಷ್ಠಿತ ಆಂಗ್ಲ ಮಾಧ್ಯಮ ಶಾಲೆಗಳು ಸಂವೇದನೆ ರಹಿತ ವಿದ್ಯಾರ್ಥಿಗಳನ್ನು ಉತ್ಪಾದಿಸುತ್ತಿವೆ. ಆದರೆ ಕನ್ನಡ ಮಾಧ್ಯಮದ ವಿದ್ಯಾರ್ಥಿ ಗಳ ಲವಲವಿಕೆ ನೋಡುವಾಗ ನಮ್ಮ ಹೆತ್ತವರು ಎಲ್ಲೋ ತಪ್ಪುತ್ತಿದ್ದಾರೆ ಎಂದು ಭಾಸವಾಗುತ್ತಿದೆ. ಕನ್ನಡ ಶಾಲೆಯ ಸಂಖ್ಯೆ ಕುಸಿಯದಂತೆ ಹೆತ್ತವರುಜಾಗೃತ ರಾಗಬೇಕಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಕಟಪಾಡಿ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯ ದೇವೇಂದ್ರ ನಾಯಕ್, ನಿಟ್ಟೆ ಎನ್‌ಎಂಎಎಂ ತಾಂತ್ರಿಕ ವಿಶ್ವವಿದ್ಯಾಲಯದ ಉಪನ್ಯಾಸಕ ಯು.ರಾಕೇಶ್ ಜೋಶಿ ಮಾತ ನಾಡಿದರು. ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಿರೀಶ್ ಕುಮಾರ್, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಕೃಷ್ಣರಾಜ ಭಟ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಗಣೇಶ್ ಉಪಸ್ಥಿತರಿದ್ದರು.

       ಸಂಚಾಲಕ ಉದ್ಯಾವರ ನಾಗೇಶ್ ಕುಮಾರ್ ಸ್ವಾಗತಿಸಿದರು. ಮುಖ್ಯೋ ಪಾಧ್ಯಾಯ ಗಣಪತಿ ಕಾರಂತ್ ಶಾಲಾ ವರದಿ ವಾಚಿಸಿದರು. ಹಿರಿಯ ಸಹಶಿಕ್ಷಕ ಮ್ಯಾಕ್ಸಿಂ ಡಿಸಿಲ್ವ ವಂದಿಸಿದರು. ಸಹ ಶಿಕ್ಷಕಿ ಗೀತಾ ಕಾರ್ಯಕ್ರಮ ನಿರ್ವಹಿಸಿದರು.ಬಳಿಕ ವಿದ್ಯಾರ್ಥಿಗಳಿಂದ ನೃತ್ಯವೈವಿಧ್ಯ, ಅಣಿಲು ರಾಮಾಯಣ ನಾಟಕ ಮತ್ತು ಯಕ್ಷಗಾನ ರುಕ್ಮಿಣಿ ಸ್ವಯಂವರ ಯಕ್ಷಗಾನ ಪ್ರದರ್ಶನಗೊಂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News