×
Ad

ಜ. 17 : ಬಿ.ಸಿ.ರೋಡಿನಲ್ಲಿ ತಾಲೂಕು ಮಟ್ಟದ ಅಂಬೇಡ್ಕರ್ ಭವನಕ್ಕೆ ಶಿಲಾನ್ಯಾಸ

Update: 2017-01-16 19:36 IST

ಬಂಟ್ವಾಳ, ಜ. 16: ತಾಲೂಕು ಮಟ್ಟದ ಅಂಬೇಡ್ಕರ್ ಭವನ ಮತ್ತು ಹೋಬಳಿ ಮಟ್ಟದ ಅಂಬೇಡ್ಕರ್ ಭವನದ ಶಿಲಾನ್ಯಾಸವು ಜ. 17ರಂದು ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ತಾಲೂಕು ಪಂಚಾಯತ್ ಕಚೇರಿ ಬಳಿ ನಡೆಯಲಿದೆ.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ಶಂಕುಸ್ಥಾಪನೆಯನ್ನು ಮಾಡಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಆಹಾರ ಸಚಿವ ಯು.ಟಿ.ಖಾದರ್, ವಿಧಾನ ಪರಿಷತ್‌ನ ಶಾಸಕ ಐವನ್ ಡಿ’ಸೋಜ, ವಿಧಾನ ಪರಿಷತ್ ವಿರೋಧ ಪಕ್ಷದ ಶಾಸಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಪುತ್ತೂರು ಶಾಸಕಿ ಶಕುಂತಲಾ ಟಿ. ಶೆಟ್ಟಿ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ತು ಶಾಸಕ ಕೆ.ಪ್ರತಾಪಚಂದ್ರ ಶೆಟ್ಟಿ, ಕೋಟ ಶ್ರೀನಿವಾಸ ಪೂಜಾರಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಬಂಟ್ವಾಳ ತಾಪಂ ಅಧ್ಯಕ್ಷ ಕೆ.ಚಂದ್ರಹಾಸ ಕರ್ಕೇರಾ, ಬಂಟ್ವಾಳ ಪುರಸಭೆಯ ಅಧ್ಯಕ್ಷ ರಾಮಕೃಷ್ಣ ಆಳ್ವ, ಬಂಟ್ವಾಳ ತಾಪಂ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಬಂಟ್ವಾಳ ಪುರಸಭೆಯ ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ಬಂಟ್ವಾಳ ತಾಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ದ.ಕ. ಜಿಲ್ಲಾಧಿಕಾರಿ ಡಾ. ಕೆ.ಜಿ.ಜಗದೀಶ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಂ.ಆರ್.ರವಿ, ಪೋಲಿಸ್ ಅಧೀಕ್ಷಕ ಭೂಷಣ್ ಗುಲಾಬ್ ರಾವ್ ಬೊರಸೆ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಾ. ಜಿ.ಸಂತೋಷ್ ಕುಮಾರ್, ಯೋಜನಾ ಸಮನ್ವಯಾಧಿಕಾರಿ ಡಾ. ಬಿ. ಎಸ್. ಹೇಮಲತಾ ಭಾಗವಹಿಸಲಿದ್ದಾರೆ ಉಪಸ್ಥಿತಲಿರುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News