ಲೋಕಾಯುಕ್ತ ಹುದ್ದೆಗೆ ನ್ಯಾ. ವಿಶ್ವನಾಥ ಶೆಟ್ಟಿ ಹೆಸರು ತಿರಸ್ಕಾರ
Update: 2017-01-16 21:15 IST
ಬೆಂಗಳೂರು, ಜ.16: ರಾಜ್ಯಪಾಲ ಹುದ್ದೆಗೆ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಹೆಸರನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ.
ಇತ್ತೀಚೆಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಉನ್ನತ ಅಧಿಕಾರ ಸಮಿತಿಯು ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಹೆಸರನ್ನು ಖಾಲಿ ಇರುವ ಲೋಕಾಯುಕ್ತ ಹುದ್ದೆಗೆ ಆಯ್ಕೆ ಮಾಡಿ ಒಮ್ಮತ ನಿರ್ಧಾರ ಕೈಗೊಂಡಿತ್ತು. ಅದರಂತೆ ಲೋಕಾಯುಕ್ತ ಹುದ್ದೆಗೆ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಹೆಸರನ್ನು ನೇಮಕ ಮಾಡಲು ರಾಜ್ಯಪಾಲರಿಗೆ ಶಿಫಾರಸು ಮಾಡಲಾಗಿತ್ತು.
ರಾಜ್ಯಪಾಲ ವಜೂಭಾಯ್ ವಾಲಾ ಅವರು ಲೋಕಾಯುಕ್ತ ಹುದ್ದೆಗೆ ನ್ಯಾ. ವಿಶ್ವನಾಥ ಶೆಟ್ಟಿ ಆಯ್ಕೆ ಕ್ರಮದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ರಾಜ್ಯಸರಕಾರಕ್ಕೆ ರಾಜ್ಯಪಾಲರು ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ.