ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು

Update: 2017-01-16 18:39 GMT

ಕೋಟ, ಜ.16: ಹೊಂಬಾಡಿ ಮಂಡಾಡಿ ಗ್ರಾಮದ ಹುಣ್ಸೆಮಕ್ಕಿ ಎಂಬಲ್ಲಿ ಇಂದು ಬೆಳಗ್ಗೆ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಒಂದನೆ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ.

ಮೃತರನ್ನು ಹಂಗಳೂರು ಗ್ರಾಮದ ನೇರಂಬಳ್ಳಿಯ ಶೀನ ಪೂಜಾರಿ ಎಂಬವರ ಮಗ ಜೋಗ ಪೂಜಾರಿ(38) ಎಂದು ಗುರುತಿಸಲಾಗಿದೆ.

ಕಟ್ಟಡದಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರನ್ನು ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ.

 ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News