ನಾಳೆ ಮಿನಿ ವಿಧಾನಸೌಧಕ್ಕೆ ಶಿಲಾನ್ಯಾಸ
Update: 2017-01-17 00:13 IST
ಉಡುಪಿ, ಜ.16: ಜಿಲ್ಲಾಡಳಿತದ ವತಿಯಿಂದ ಉಡುಪಿ ಬನ್ನಂಜೆಯಲ್ಲಿ ನೂತನವಾಗಿ ನಿರ್ಮಿಸಲಾಗುವ ಮಿನಿ ವಿಧಾನಸೌಧ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಜ.18ರಂದು ಬೆಳಗ್ಗೆ 11ಕ್ಕೆ ಉಡುಪಿ ಬನ್ನಂಜೆ ತಾಲೂಕು ಕಚೇರಿ ಆವರಣದಲ್ಲಿ ನಡೆಯಲಿದೆ.
ಸಚಿವ ಪ್ರಮೋದ್ ಮಧ್ವರಾಜ್ ಶಿಲಾನ್ಯಾಸವನ್ನು ನೆರವೇರಿಸಿ, ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.