×
Ad

36 ಕೋಟಿ ರೂಗಳ ವಿವಿಧ ಯೋಜನೆಗಳ ಉದ್ಘಾಟನೆ, ಶಿಲಾನ್ಯಾಸ ಸರಣಿ ಕಾರ್ಯಕ್ರಮಗಳಿಗೆ ಸಚಿವ ಹೆಚ್.ಆಂಜನೇಯ ಚಾಲನೆ

Update: 2017-01-17 13:49 IST

ಮಂಗಳೂರು, ಜ.17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆಯಿಂದ ವಿವಿಧ ಕಡೆಗಳಲ್ಲಿ ಹಮ್ಮಿಕೊಂಡ 36 ಕೋಟಿ ರೂ. ಯೋಜನೆಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಕಾರ್ಯಕ್ರಮಗಳ ಸರಣಿಯನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಹೆಚ್.ಆಂಜನೇಯ ನಗರದ ಮಾರಿಗುಡಿ ಬಳಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯವನ್ನು ಉದ್ಘಾಟಿಸುವುದರೊಂದಿಗೆ ಇಂದು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್, ಶಾಸಕ ಜೆ.ಆರ್.ಲೋಬೊ, ಐವನ್ ಡಿ'ಸೋಜ, ಮೇಯರ್ ಹರಿನಾಥ್, ಮನಪಾ ಮುಖ್ಯ ಸಚೇತಕ ಶಶಿಧರ ಹೆಗ್ಡೆ, ಮನಪಾ ಸದಸ್ಯ ರಾಧಾಕೃಷ್ಣ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಎಂ.ಆರ್.ರವಿ, ಮನಪಾ ಆಯುಕ್ತ ಮುಹಮ್ಮದ್ ನಝೀರ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News