×
Ad

​ಎತ್ತಿನಹೊಳೆ ಯೋಜನೆಗೆ ಬಿಎಸ್‌ವೈ ಬೆಂಬಲ: ನೇತ್ರಾವತಿ ಸಂಯುಕ್ತ ರಕ್ಷಣಾ ಸಮಿತಿ ಅಸಮಾಧಾನ

Update: 2017-01-18 12:12 IST

ಮಂಗಳೂರು, ಜ.18: ಎತ್ತಿನಹೊಳೆ ಯೋಜನೆ ವಿಚಾರಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬೆಂಬಲ ಸೂಚಿಸಿರುವುದಕ್ಕೆ ನೇತ್ರಾವತಿ ಸಂಯುಕ್ತ ರಕ್ಷಣಾ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ.

ಈ ಕುರಿತಂತೆ ಮಂಗಳೂರಿನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನೇತ್ರಾವತಿ ಸಂಯುಕ್ತ ರಕ್ಷಣಾ ಸಮಿತಿಯ ಮುಖಂಡ, ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ, ಎತ್ತಿನಹೊಳೆ ಯೋಜನೆ ವಿಚಾರವಾಗಿ ಯಡಿಯೂರಪ್ಪಆ ರೀತಿಯ ಹೇಳಿಕೆ ನೀಡಬಾರದಿತ್ತು. ಈ ವಿಚಾರವಾಗಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಗುವುದು. ಎತ್ತಿನಹೊಳೆ ಯೋಜನೆಯನ್ನು ಬೆಂಬಲಿಸದಂತೆ ಅವರ ಮನವೊಲಿಸುವುದಾಗಿ ತಿಳಿಸಿದರು.

ಇದೇ ಎತ್ತಿನಹೊಳೆ ಯೋಜನೆ ಕುರಿತಂತೆ ಮುಖ್ಯಮಂತ್ರಿಯವರೊಂದಿಗೆ ಇತ್ತೀಚೆಗೆ ಮಾತುಕತೆ ನಡೆಸಿದ ಮೇಲೂ ಯಾವುದೇ ಸಕರಾತ್ಮಕ ಬೆಳವಣಿಗೆಗಳು ಆಗಿಲ್ಲ. ಈ ಹಿನ್ನೆಲೆಯಲ್ಲಿ ಯೋಜನೆ ವಿರುದ್ಧ ಜ.26ರಿಂದ ಹೋರಾಟ ಮತ್ತೆ ಮುಂದುವರಿಯಲಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News