×
Ad

ಕುಂಬ್ರದಲ್ಲಿ ಕಾಣಿಸಿಕೊಂಡ ಮಲೇರಿಯಾ : ಜಿಲ್ಲಾ ಆರೋಗ್ಯಾಧಿಕಾರಿಗಳ ತಂಡ ಭೇಟಿ

Update: 2017-01-18 17:04 IST

ಪುತ್ತೂರು , ಜ.18 : ತಾಲೂಕಿನ ಕುಂಬ್ರ ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿಯೋರ್ವರಿಗೆ ಮಲೇರಿಯಾ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಾಲೆಯಲ್ಲಿನ ವಿದ್ಯಾರ್ಥಿಗಳ ವೈಧ್ಯಕೀಯ ಪರೀಕ್ಷೆ ನಡೆಸುವ ಉದ್ದೇಶದಿಂದ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಬುಧವಾರ ಶಾಲೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ತಪಾಸಣೆ ನಡೆಸಿದರು.

ಶಾಲೆಯಲ್ಲಿ 200 ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಸುಮಾರು 17 ಮಂದಿ ಮಕ್ಕಳಲ್ಲಿ ಜ್ವರ ಕಾಣಿಸಿಕೊಂಡಿದ್ದು , ಇದು ಮಲೇರಿಯಾ ಎಂದು ದೃಢೀಕರಣವಾಗಿಲ್ಲ. ಮಕ್ಕಳ ರಕ್ತ ಪರೀಕ್ಷೆ ನಡೆಸಲಾಗಿದ್ದು , ಮಕ್ಕಳಿಗೆ ಔಷಧಿಯನ್ನು ವಿತರಣೆ ಮಾಡಿದ್ದಾರೆ.

ಬೇಸಿಗೆಯಲ್ಲಿ ಅನಿರೀಕ್ಷಿತವಾಗಿ ಕಾಣಿಸಿಕೊಂಡ ಮಲೇರಿಯಾ ಜ್ವರವು ಸಾಂಕ್ರಾಮಿಕವಾಗಿ ಹರಡುವ ಮುನ್ನವೇ ಜಿಲ್ಲಾ ಆರೋಗ್ಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡುವುದರ ಜೊತೆಗೆ ಸುತ್ತಮುತ್ತಲ ಪರಿಸರವನ್ನು ಪರಿಶೀಲನೆ ನಡೆಸಿದರು.ಇಲ್ಲಿನ ಶಾಲಾ ಶಿಕ್ಷಕಿಯೋರ್ವರಿಗೆ ಜ್ವರ ಕಾಣಿಸಿಕೊಂಡಿದೆ. ಬೇಸಿಗೆಯಲ್ಲಿ ಮಲೇರಿಯಾ ಕಾಣಿಸಿಕೊಳ್ಳುವುದು ಅಪರೂಪವಾಗಿದೆ. ಮಕ್ಕಳಿಗೆ ಜ್ವರ ಬಾರದೆ ಇರಲಿ ಎಂಬ ಉದ್ದೇಶದಿಂದ ಜಿಲ್ಲಾ ಆರೋಗ್ಯ ಇಲಾಖೆಯ ತಂಡ ಭೇಟಿ ನೀಡಿ ಮಕ್ಕಳ ರಕ್ತ ಪರೀಕ್ಷೆ ನಡೆಸಿದೆ. ಗಂಭೀರ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್‌ಕುಮಾರ್ ರೈ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News