×
Ad

ಅಕ್ರಮ ಮರದ ದಿಮ್ಮಿಗಳ ಸಾಗಾಟ : ಲಾರಿ ಸಹಿತ ಸೊತ್ತಗಳ ವಶ

Update: 2017-01-18 20:15 IST

ಬೆಳ್ತಂಗಡಿ , ಜ.18 : ಲಾರಿಯಲ್ಲಿ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ವೇಣೂರು ಅರಣ್ಯ ಇಲಾಖಾಧಿಕಾರಿಗಳು ಬುಧವಾರ  ಮರೋಡಿ ಗ್ರಾಮದ ಕೂಕ್ರಬೆಟ್ಟು ಎಂಬಲ್ಲಿ ದಾಳಿ ನಡೆಸಿ ಲಾರಿ ಸಹಿತ ಸ್ವತ್ತುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಒಟ್ಟು ಸ್ವತ್ತುಗಳ ಮೌಲ್ಯ ಲಾರಿ ಸಹಿತ ರೂ. 4 ಲಕ್ಷ ಎಂದು ಅಂದಾಜಿಸಲಾಗಿದೆ.

ವೇಣೂರು ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್ಯ, ಉಪ ವಲಯ ಅರಣ್ಯಾಧಿಕಾರಿ ರಾಜೇಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಂಡಿದ್ದು, ಅರಣ್ಯ ರಕ್ಷಕರಾದ ರವಿಕುಮಾರ್ ಡಿ., ಸಂದೀಪ್, ಜನಾರ್ದನ ಗೌಡ, ಶಶಿಕಾಂತ್ ಅರಣ್ಯ ವೀಕ್ಷಕರಾದ ಹರೀಶ್, ಪ್ರಶಾಂತ್ ವಾಹನ ಚಾಲನ ಆಶ್ಲೇಷ ಕಾರ್ಯಾಚರಣೆಯಲ್ಲಿ ಸಹಕರಿಸಿದರು.

ಪ್ರಕರಣದ ಮುಂದಿನ ತನಿಖೆಯನ್ನು ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಎ.ವಿ. ಅಮರ್‌ನಾಥ್ ಇವರ ನಿರ್ದೇಶನದಂತೆ ಅಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ಎಚ್.ಆರ್. ಅವರು ಕೈಗೊಂಡಿದ್ದಾರೆ.

ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಸಾರ್ವಜನಿಕರಿಂದ ಕೇಳಿ ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News