ಬಿಜೆಪಿ ಶಾಸಕ ರಾಜು ಕಾಗೆ ಸೇರಿದಂತೆ 6 ಮಂದಿ ಪೊಲೀಸರ ವಶಕ್ಕೆ
Update: 2017-01-19 12:17 IST
ಬೆಳಗಾವಿ, ಜ.19: ಕಾಂಗ್ರೆಸ್ ಕಾರ್ಯಕರ್ತ ವಿವೇಕ ಶೆಟ್ಟಿ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಪಕರಣಕ್ಕೆ ಸಂಬಂಧಿಸಿ ಕಾಗವಾಡದ ಬಿಜೆಪಿ ಶಾಸಕ ರಾಜು ಕಾಗೆ ಸೇರಿದಂತೆ 6 ಮಂದಿ ಆರೋಪಿಗಳನ್ನು ಪೊಲೀಸರು ಪುಣೆಯಲ್ಲಿ ವಶಕ್ಕೆ ಪಡೆದಿದ್ದಾರೆ.
ಒಟ್ಟು 13 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಇನ್ನೂ ಏಳು ಮಂದಿ ತಲೆಮರೆಸಿಕೊಂಡಿದ್ದಾರೆ.
ರಾಜು ಕಾಗೆ ಸಹೋದರ ಪ್ರಸಾದ್ ಸಿದ್ದಗೌಡ, ಪುತ್ರಿ ತೃಪ್ತಿ ಕಾಗೆ, ಸಿದ್ದಗೌಡ ಕಾಗೆ ಪತ್ನಿ ಶೋಭಾ, ಚಾಲಕ ಬಾಹುಬಲಿ ಮತ್ತು ಅಶೋಕ್ ಕಾಗೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಶಕ್ಕೆ ಪಡೆದಿರುವ ಆರು ಮಂದಿ ಆರೋಪಿಗಳನ್ನು ಪೊಲೀಸರು ಅಥಣಿಗೆ ಕರೆ ತರುತ್ತಿದ್ದಾರೆ. ಇಂದು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.