ಉಪ್ಪಿನಂಗಡಿಯಲ್ಲಿ ನೇಣು ಬಿಗಿದು ವ್ಯಕ್ತಿಯ ಆತ್ಮಹತ್ಯೆ
Update: 2017-01-19 13:44 IST
ಉಪ್ಪಿನಂಗಡಿ, ಜ.19: ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ಗುರುವಾರ ಬೆಳಗ್ಗೆ ವರದಿಯಾಗಿದೆ.
ಮೂಲತಃ ಎರ್ನಾಕುಳಂ ನಿವಾಸಿ ಜಾನಿ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಉಪ್ಪಿನಂಗಡಿಯಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರಾಗಿ ದುಡಿಯುತ್ತಿದ್ದ ಈತ ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಬದಿಯ ಲೀನಾ ಕಾಂಪೌಂಡ್‌ನಲ್ಲಿ ಬಾಡಿಗೆ ಮನೆ ಪಡೆದು ಒಬ್ಬಂಟಿಯಾಗಿ ವಾಸ್ತವ್ಯವಿದ್ದರು. ಗುರುವಾರ ಬೆಳಗ್ಗೆ ಬಾಡಿಗೆ ಕೊಠಡಿಯಿದ್ದ ಕಟ್ಟಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ. ಮಾನಸಿಕ ಖಿನ್ನತೆಯಿಂದ ಇವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.