×
Ad

​ಜ.24ರಂದು ಬಿಸಿಸಿಐ ಅಧಿಕಾರಿಗಳ ಪಟ್ಟಿ ಪ್ರಕಟಿಸಲಿರುವ ಸುಪ್ರೀಂ

Update: 2017-01-20 17:35 IST

ಹೊಸದಿಲ್ಲಿ, ಜ.20: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪದಾಧಿಕಾರಿಗಳ ಪಟ್ಟಿಯನ್ನು ಜ.24ರಂದು ಸುಪ್ರೀಂಕೋರ್ಟ್ ಪ್ರಕಟಿಸಲಿದೆ.
ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ ಇಂದು ಈ ನಿರ್ಧಾರ ಕೈಗೊಂಡಿದೆ.
 ಸುಪ್ರೀಂ ಕೋರ್ಟ್‌ನಿಂದ ಅಮಿಕಸ್‌ಕ್ಯೂರಿಯಾಗಿ ನೇಮಕಗೊಂಡಿರುವ ಹಿರಿಯ ವಕೀಲರಾದ ಅನಿಲ್ ದಿವಾನ್ ಮತ್ತು ಗೋಪಾಲ್ ಸುಬ್ರಹ್ಮಣ್ಯಮ್ ಅವರು ನ್ಯಾಯಾಲಯದ ನಿರ್ದೇಶನದಂತೆ ಇಂದು ನ್ಯಾಯಾಲಯಕ್ಕೆ ಬಿಸಿಸಿಐಗೆ ನಿರ್ದೇಶನಗೊಂಡ 9 ಮಂದಿ ಆಡಳಿತಾಧಿಕಾರಿಗಳ ಪಟ್ಟಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ್ದಾರೆ.
  ಈ ಹಿಂದೆ ಬಿಸಿಸಿಐ ಹಾಗೂ ರಾಜ್ಯ ಕ್ರಿಕೆಟ್ ಸಂಸ್ಥೆಗಳಲ್ಲಿ 9 ವರ್ಷಗಳಿಂದ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವವರನ್ನು ಅನರ್ಹಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಇದೇ ವೇಳೆ ಬಿಸಿಸಿಐ ಆಡಳಿತಾಧಿಕಾರಿಗಳಾಗಿ ನೇಮಕಗೊಳ್ಳಲು ಅರ್ಹತೆ ಇರುವ 9 ಮಂದಿ ಸದಸ್ಯರ ಪಟ್ಟಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಆಮಿಕಸ್‌ಕ್ಯೂರಿಗೆ ಆದೇಶ ನೀಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News