×
Ad

​ಉತ್ತರ ಪ್ರದೇಶದಲ್ಲಿ ಎಸ್ಪಿ ಪಟ್ಟಿ ಬಿಡುಗಡೆ; ಕಾಂಗ್ರೆಸ್ ಅಪಸ್ವರ

Update: 2017-01-20 21:56 IST

 ಹೊಸದಿಲ್ಲಿ, ಜ.20: ಮುಂಬರುವ ವಿಧಾನ ಸಭಾ ಚುನಾವಣೆಗೆ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಮಹಾಮೈತ್ರಿಗೆ ವೇದಿಕೆ ಸಿದ್ದವಾಗುತ್ತಿದ್ದಂತೆ , ಸಮಾಜವಾದಿ ಪಕ್ಷದ ವರಿಷ್ಠ ಮುಖ್ಯ ಮಂತ್ರಿ ಅಖಿಲೇಶ್ ಯಾದವ್ 191 ಮಂದಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿರುವ ಬೆನ್ನೆಲ್ಲೇ ಕಾಂಗ್ರೆಸ್ ಪಾಳಯದಲ್ಲಿ ಅಪಸ್ವರ ಕೇಳಿ ಬಂದಿದೆ.
 ಕಾಂಗ್ರೆಸ್‌ನ ಶಾಸಕರು ಇರುವ 9 ಕ್ಷೇತ್ರಗಳಿಗೆ ಸಮಾಜವಾದಿ ಪಕ್ಷ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿರ್ಧಾರ ಕೈಗೊಂಡಿರುವುದು ಕಾಂಗ್ರೆಸ್‌ನ ಅಸಮಾಧಾನಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ಶಾಸಕರನ್ನು ಹೊಂದಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಯೋಜನೆಯಲ್ಲಿತ್ತು. ಆದರೆ ಇದೀಗ ಎಸ್‌ಪಿ ನಿರ್ಧಾರ ಕಾಂಗ್ರೆಸ್‌ನ ಸಿಟ್ಟಿಗೆ ಕಾರಣವಾಗಿದೆ. ಎಸ್‌ಪಿ ನಿರ್ಧಾರದ ಬಗ್ಗೆ ಕಾಂಗ್ರೆಸ್‌ನ ವಕ್ತಾರ ಅಜಯ್ ಮಕಾನ್ ವಿರೋಧ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News