ಬಿಜೆಪಿ ರಾಜ್ಯ ಕಾರ್ಯಕಾರಣಿ ಉದ್ಘಾಟನೆ
Update: 2017-01-21 13:25 IST
ಕಲಬುರಗಿ, ಜ.21: ಇಂದಿಲ್ಲಿ ಆರಂಭಗೊಂಡ ಬಿಜೆಪಿಯ ರಾಜ್ಯ ಕಾರ್ಯಕಾರಿಣಿಯನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಉದ್ಘಾಟಿಸಿದರು.
ಬಳಿಕ ಪಕ್ಷದ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಜನರ ವಿಶ್ವಾಸಕ್ಕೆ ದ್ರೋಹ ಬಗೆಯದಿರಿ. ಅವರ ಆಶೋತ್ತರಗಳಿಗೆ ಸ್ಪಂದಿಸುವ, ಅವರ ಭಾವನೆಗಳಿಗೆ ದನಿಯಾಗುವತ್ತ ಶ್ರಮಿಸಿ. ಕೇಂದ್ರ ಸರ್ಕಾರದ ಸಾಧನೆಗಳ ಬಗ್ಗೆ ಜಾಗೃತಿ ಮೂಡಿಸಿ, ಜನರಿಗೆ ಇನ್ನೂ ಹೆಚ್ಚು ಹತ್ತಿರವಾಗುವಂತೆ ಹೇಳಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅನಂತ್‌ಕುಮಾರ್, ಡಿ.ವಿ.ಸದಾನಂದ ಗೌಡ, ಮುಖಂಡರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಪ್ರಹ್ಲಾದ್ ಜೋಶಿ ಮತ್ತಿತರರು ಉಪಸ್ಥಿತರಿದ್ದರು.