ವಂಚನೆ ಪ್ರಕರಣ: ಬಿಜೆಪಿ ರಾಷ್ಟ್ರೀಯ ಎಸ್‌ಸಿ ಮೋರ್ಚಾ ಸದಸ್ಯನ ಬಂಧನ
Update: 2017-01-21 15:39 IST
ಕಲಬುರಗಿ, ಜ.21: ಇಲ್ಲಿ ನಡೆಯುತ್ತಿರುವ ಬಿಜೆಪಿಯ ಕಾರ್ಯಕಾರಿಣಿ ಸಭೆಯ ವೇಳೆಯೇ ಬಿಜೆಪಿಯ ರಾಷ್ಟ್ರೀಯ ಎಸ್‌ಸಿ ಮೋರ್ಚಾದ ಸದಸ್ಯ ವೆಂಕಟೇಶ್ ವೌರ್ಯನನ್ನು ಬೆಂಗಳೂರಿನ ಉಪ್ಪಾರಪೇಟೆಯ ಪೊಲೀಸರು ಬಂಧಿಸಿದ್ದಾರೆ.
ವೌರ್ಯನ ವಿರುದ್ಧ ಮಹಿಳೆಯೊಬ್ಬರು 2011ರಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದರು. ಇಬ್ಬರ ನಡುವೆ ಸಂಧಾನ ನಡೆಸಲು ಪೊಲೀಸರು ಯತ್ನಿಸಿದ್ದರು. ಆದರೆ, ಸಂಧಾನ ಯಶಸ್ವಿಯಾಗಿರಲಿಲ್ಲ.
ವಂಚನೆ ಪ್ರಕರಣ ದಾಖಲಾದ ಬಳಿಕ ವೌರ್ಯ ತಲೆಮರೆಸಿಕೊಂಡಿದ್ದರು. ಬಿಜೆಪಿಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗಿಯಾಗಲು ವೌರ್ಯ ಬರುತ್ತಾರೆಂದು ಖಚಿತ ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ತೆರಳಿ ಆತನನ್ನು ಬಂಧಿಸಿದ್ದಾರೆ.