×
Ad

ಅಕ್ರಮ ಮರ ದಾಸ್ತಾನು ಪತ್ತೆಹಚ್ಚಿದ ಅರಣ್ಯಾಧಿಕಾರಿಗಳಿಗೆ ಹಲ್ಲೆ

Update: 2017-01-21 18:23 IST

ಕಡಬ, ಜ.21. ಇಲ್ಲಿಗೆ ಸಮೀಪದ ಕೊಂಬಾರು ಎಂಬಲ್ಲಿ ಅಕ್ರಮ ಮರ ದಾಸ್ತಾನು ಮಾಡಲಾಗಿದ್ದನ್ನು ಪತ್ತೆಹಚ್ಚಿದ ಅರಣ್ಯ ಇಲಾಖಾಧಿಕಾರಿಗಳಿಗೆ ವ್ಯಕ್ತಿಯೋರ್ವ ಹಲ್ಲೆ ನಡೆಸಿ ಬೈಕ್‌ಗಳೆರಡನ್ನು ಧ್ವಂಸಗೊಳಿಸಿದ ಬಗ್ಗೆ ಕೊಂಬಾರು ಶಾಖೆಯ ಉಪ ವಲಯ ಅರಣ್ಯಾಧಿಕಾರಿಯವರು ಕಡಬ ಠಾಣೆಗೆ ದೂರು ನೀಡಿದ್ದಾರೆ.

ಕೊಂಬಾರು ಗ್ರಾಮದ ಕೊಂಬಾರು ಗದ್ದೆಯ ಸರಕಾರಿ ಜಾಗದಲ್ಲಿ ಐದು ಮರಗಳನ್ನು ಅಕ್ರಮವಾಗಿ ಕಡಿದಿದ್ದಾರೆಂಬ ಮಾಹಿತಿ ಮೇರೆಗೆ ಕೊಂಬಾರು ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಕೃಷ್ಣಮೂರ್ತಿ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಅಕ್ರಮ ಮರಗಳನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ಆರೋಪಿ ಕೊಂಬಾರು ಗದ್ದೆ ನಿವಾಸಿ ವೀರಪ್ಪ ಗೌಡ ಎಂಬವರ ಪುತ್ರ ಚಂದ್ರಶೇಖರ(42) ಎಂಬವರು ಮದ್ಯ ಸೇವಿಸಿ ಬಂದು ಹಲ್ಲೆ ನಡೆಸಿದ್ದರೆನ್ನಲಾಗಿದೆ.

ಈ ಬಗ್ಗೆ ಅರಣ್ಯಾಧಿಕಾರಿಗಳು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿರುವ ಕಡಬ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News