ಹಿಲರಿ ಉಪಸ್ಥಿತಿಗೆ ಧನ್ಯವಾದ ಹೇಳಿದ ಟ್ರಂಪ್

Update: 2017-01-21 14:31 GMT

ವಾಶಿಂಗ್ಟನ್, ಜ. 21: ಅಧ್ಯಕ್ಷೀಯ ಚುನಾವಣೆಯಲ್ಲಿ ತನ್ನ ಎದುರಾಳಿಯಾಗಿದ್ದ ಡೆಮಾಕ್ರಟಿಕ್ ಪಕ್ಷದ ಹಿಲರಿ ಕ್ಲಿಂಟನ್ ಮತ್ತು ಅವರ ಗಂಡ ಹಾಗೂ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ತನ್ನ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಹಾಜರಾಗಿರುವುದಕ್ಕೆ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಧನ್ಯವಾದ ಸಲ್ಲಿಸಿದ್ದಾರೆ.

ಅವರ ಉಪಸ್ಥಿತಿಯಿಂದ ತಾನು ಗೌರವಿಸಲ್ಪಟ್ಟಿದ್ದೇನೆ ಎಂದು ಹೇಳಿದ ಅವರು, ಅವರಿಗೆ ಎದ್ದು ನಿಂತು ಚಪ್ಪಾಳೆ ಹೊಡೆಯುವ ಮೂಲಕ ಗೌರವ ಸಲ್ಲಿಸುವಂತೆ ಸಭಿಕರನ್ನು ವಿನಂತಿಸಿದರು.

‘‘ಅಧ್ಯಕ್ಷ ಬಿಲ್ ಕ್ಲಿಂಟನ್ ಮತ್ತು ಕಾರ್ಯದರ್ಶಿ ಹಿಲರಿ ಕ್ಲಿಂಟನ್ ಇಂದು ಬರುತ್ತಾರೆ ಎಂಬುದನ್ನು ಕೇಳಿದಾಗ ನನ್ನಲ್ಲಿ ಧನ್ಯತೆಯ ಭಾವ ಹುಟ್ಟಿತು. ಈ ಇಬ್ಬರ ಬಗ್ಗೆ ನನಗೆ ಅತ್ಯಂತ ಗೌರವವಿದೆ’’ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News