ರೈತರ ಆತ್ಮಹತ್ಯೆ ತಡೆಗೆ ಜಿಲ್ಲಾಡಳಿತದಿಂದ ಜಾಗೃತಿ ಕಾರ್ಯಕ್ರಮ: ಜಿಲ್ಲಾಧಿಕಾರಿ

Update: 2017-01-21 17:45 GMT


ಚಿಕ್ಕಮಗಳೂರು, ಜ.21: ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ತಡೆಯಲು ಜಿಲ್ಲಾಡಳಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಜಿ. ಸತ್ಯವತಿ ತಿಳಿಸಿದ್ದಾರೆ.
ಅವರು ಜಿಲ್ಲಾಧಿಕಾರಿ ಅವರ ನ್ಯಾಯಾಂಗ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳ ಕುರಿತು ನಡೆದ ಸಭೆೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
 ರೈತರು, ದೇಶದ ಬೆನ್ನೆಲುಬು. ಅವರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬಾರದು. ರೈತರು ಆತ್ಮಹತ್ಯೆ ಮಾಡಿಕೊಂಡರೆ ಅವರ ಕುಟುಂಬ ನಷ್ಟ ಅನುಭವಿಸುವುದರಿಂದ ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಹಾದಿ ತುಳಿಯಬಾರದು ಎಂದರು.
ರೈತರಿಗೆ ಯಾವುದೇ ಸಮಸ್ಯೆ ಎದುರಾದರೂ ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಜಿಲ್ಲಾಡಳಿತ ಎಂದಿಗೂ ಅನ್ನದಾತನ ಪರವಾಗಿದೆ ಎಂದು ಭರವಸೆ ನೀಡಿದ ಜಿಲ್ಲಾಧಿಕಾರಿ.ಜಿಲ್ಲೆಯಲ್ಲಿ ಈಗಾಗಲೇ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಗಳಿಗೆ ಕೂಡಲೇ ಸರಕಾರದಿಂದ ನೀಡುವ ಸವಲತ್ತುಗಳನ್ನು ವಿತರಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಉಪವಿಭಾಗಾಧಿ ಕಾರಿಯವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ರೈತರು ಆತ್ಮಹತ್ಯೆ ಮಾಡಿಕೊಂಡ ಕುರಿತು ಪರಿಶೀಲಿಸಿ ಪರಿಹಾರ ನೀಡುತ್ತದೆ. ಮರಣ ಹೊಂದಿದ ರೈತರ ಕುಟುಂಬಕ್ಕೆ ಆತನ ಪತ್ನಿಗೆ 2 ಸಾವಿರ ರೂ. ಮಾಸಾಶನ, ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ ವ್ಯವಸ್ಥೆ ಮಾಡಲಾಗುತ್ತದೆ. ಅಲ್ಲದೆ ಮರಣ ಹೊಂದಿದ ರೈತರು ಖಾಸಗಿ ಲೇವಾದೇವಿದಾರರಿಂದ ಸಾಲ ಪಡೆದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬಹುದಾಗಿದೆ ಎಂದರು.
ಜಿಲ್ಲೆಯಲ್ಲಿ ಖಾಸಗಿ ಲೇವಾದೇವಿದಾರು ಸರಕಾರ ನಿಗದಿಪಡಿಸಿರುವ ಬಡ್ಡಿಗಿಂತ ರೈತರಿಂದ ಹೆಚ್ಚಿನ ಬಡ್ಡಿ ವಸೂಲಿ ಮಾಡಿದರೆ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರಗಿಸಲಾಗುವುದು. ಬ್ಯಾಂಕುಗಳು ರೈತರಿಗೆ ನೀಡಿರುವ ಸಾಲ ವಸೂಲಿಗೆ ಸಂಬಂಧಿಸಿದಂತೆ ಒತ್ತಡ ಹಾಕಬಾರದು. ತಾಲೂಕುಗಳಲ್ಲಿ ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಪ್ರತಿ ತಿಂಗಳು ಸಭೆ ನಡೆಸಲಾಗುವುದು. ಈ ಸಭೆೆಯಲ್ಲಿ ರೈತರು ತಮ್ಮ ಅಹವಾಲುಗಳನ್ನು ನೀಡಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ, ಎಸ್ಪಿ ಕೆ. ಅ್ಣಾಮಲೈ, ಕೃಷಿ ಇಲಾಖೆ ಜಂಟಿ ನಿರ್ದೇಶಕರು ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ 2015ರ ಜನವರಿಯಿಂದ ಡಿಸೆಂಬರ್ ಅಂತ್ಯದವರೆಗೆ 50, 2016ರ ಜನವರಿಯಿಂದ ಡಿೆಂಬರ್ ತಿಂಗಳ ಅಂತ್ಯದ ವರೆಗೆ 70 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಡೂರು ತಾಲೂಕಿನಲ್ಲೇ ಡಿಸೆಂಬರ್‌ನಲ್ಲಿ 9 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಿ. ಸತ್ಯವತಿ
ಚಿಕ್ಕಮಗಳೂರು ಜಿಲ್ಲಾಧಿಕಾರಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News