ಪುತ್ತೂರು ‘ಪುಡಾ’ ಅಧ್ಯಕ್ಷರಾಗಿ ಪ್ರಸಾದ್ ಕೌಶಲ್ ಶೆಟ್ಟಿ
Update: 2017-01-22 23:17 IST
ಪುತ್ತೂರು , ಜ.22 : ನಗರ ಯೋಜನಾ ಪ್ರಾಧಿಕಾರ(ಪುಡಾ)ದ ಅಧ್ಯಕ್ಷರಾಗಿ ಪ್ರಸಾದ್ ಕೌಶಲ್ ಶೆಟ್ಟಿ ಅವರು ನೇಮಕಗೊಂಡಿದ್ದಾರೆ.
ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ, ದ.ಕ.ಜಿಲ್ಲಾ ಪರಿಷತ್‌ನ ಮಾಜಿ ಅಧ್ಯಕ್ಷ ಬೆಳ್ಳಿಪ್ಪಾಡಿ ಸಂಕಪ್ಪ ರೈ ಅವರ ಮೊಮ್ಮಗ ಪ್ರಸಾದ್ ಕೌಶಲ್ ಶೆಟ್ಟಿ ಅವರನ್ನು ಪುಡಾದ ಅಧ್ಯಕ್ಷರಾಗಿ ರಾಜ್ಯ ನಗರಾಭಿವೃದ್ಧಿ ಇಲಾಖೆ ನೇಮಕಗೊಳಿಸಿದೆ.
ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಪ್ರಸಾದ್ ಕೌಶಲ್ ಶೆಟ್ಟಿ ಅವರು ಭಾನುವಾರ ಪುಡಾದ ಆಡಳಿತಾಧಿಕಾರಿಯಾದ ಉಪವಿಭಾಗಾಧಿಕಾರಿ ರಘುನಂದನ್ ಮೂರ್ತಿ ಅವರಿಂದ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಪುಡಾದ ಅಧ್ಯಕ್ಷರಾಗಿದ್ದ ಬೆಟ್ಟ ಈಶ್ವರ ಭಟ್ ಅವರ ಅಧಿಕಾರವಧಿ ಮುಕ್ತಾಯಗೊಂಡ ಬಳಿಕ ಉಪವಿಭಾಗಾಧಿಕಾರಿಗಳು ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.