‘ಅನಿಕೇತನ ಪ್ರಶಸ್ತಿ’ಗೆ ವಾರ್ತಾಭಾರತಿಯ ಅಂಕಣಕಾರ ಸನತ್ ಕುಮಾರ್ ಬೆಳಗಲಿ ಆಯ್ಕೆ

Update: 2017-01-23 14:12 GMT

ಬೆಂಗಳೂರು, ಜ. 23: ಕನ್ನಡ ಸಂಘರ್ಷ ಸಮಿತಿಯು ರಾಷ್ಟ್ರಕವಿ ಕುವೆಂಪು ಅವರ ಹೆಸರಿನಲ್ಲಿ ನೀಡುವ 2016ನೆ ಸಾಲಿನ ಪ್ರತಿಷ್ಠಿತ ‘ಅನಿಕೇತನ ಪ್ರಶಸ್ತಿ’ಗೆ ಹಿರಿಯ ಪತ್ರಕರ್ತ ಹಾಗೂ ವಾರ್ತಾಭಾರತಿ ಪತಿಕೆಯ ಅಂಕಣಕಾರ ಸನತ್‌ಕುಮಾರ್ ಬೆಳಗಲಿ ಅವರು ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು 5 ಸಾವಿರ ರೂ.ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಜ.31ರ ಸಂಜೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ನಡೆಯಲಿರುವ ಕುವೆಂಪು-ಬೇಂದ್ರೆ ಹುಟ್ಟುಹಬ್ಬದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ನಾಗಣ್ಣ ಕಿಲಾರಿ ಆಯ್ಕೆ: ಯುವ ಕವಿಗಳನ್ನು ಪ್ರೋತ್ಸಾಹಿಸಲು ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಗುಣಸಾಗರಿ ನಾಗರಾಜ್ ಅವರು ಸಮಿತಿ ನೀಡುವ ಕುವೆಂಪು ಯುವಕ ಪ್ರಶಸ್ತಿಗೆ ಬಳ್ಳಾರಿ ಜಿಲ್ಲೆ ಕಂಪ್ಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ.ನಾಗಣ್ಣ ಕಿಲಾರಿ ಆಯ್ಕೆಯಾಗಿದ್ದಾರೆ.

ಯುವ ಪ್ರಶಸ್ತಿಯು 1ಸಾವಿರ ರೂ.ನಗದನ್ನು ಒಳಗೊಂಡಿರುತ್ತದೆ. ಇತ್ತೀಚೆಗೆ ಸಮಾವೇಶಗೊಂಡಿದ್ದ ಕನ್ನಡ ಸಂಘರ್ಷ ಸಮಿತಿಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮೇಲ್ಕಂಡ ಎರಡೂ ಪ್ರಶಸ್ತಿಗಳಿಗೆ ಇಬ್ಬರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಕನ್ನಡ ಸಂಘರ್ಷ ಸಮಿತಿ ಡಾ.ಕೋ.ವೆಂ.ರಾಮಕೃಷ್ಣೇಗೌಡ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News