×
Ad

ಮುಡಿಪು ಕಾಲೇಜಿನಲ್ಲಿ ತಾಲ್ಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆ, ಪುಸ್ತಕ ಪ್ರದರ್ಶನ

Update: 2017-01-23 20:14 IST

ಕೊಣಾಜೆ,ಜ.23: ಸ್ವಾಮಿ ವಿವೇಕಾನಂದರ 154ನೇ ಜನ್ಮ ದಿನಾಚರಣೆ ಅಂಗವಾಗಿ ಮುಡಿಪುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ  ಲ್ಲಿ ರಾಷ್ಟ್ರೀಯ ಯುವ ಸಪ್ತಾಹವನ್ನು ವಿವಿಧ ಕಾರ್ಯಕ್ರಮಗಳ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ಡಾ. ನವೀನ್ ಕೊಣಾಜೆ ನೆರವೇರಿಸಿ, ಸ್ವಾಮಿ ವಿವೇಕಾನಂದರ ಜೀವನ ಸಾಧನೆಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

  ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲ್ಲೂಕಿನ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗಾಗಿ ಸ್ವಾಮಿ ವಿವೇಕಾನಂದರ ಕುರಿತಾದ ರಸಪ್ರಶ್ನೆ ಸ್ಪರ್ಧೆ ನಡೆಸಲಾಯಿತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳದ ಪ್ರಕಾಶ್ ಹಾಗೂ ವಿವೇಕ್ (ಪ್ರಥಮ), ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ಯಾನದ ರುಬಿನಾ ಹಾಗೂ ಚೈತ್ರಾ (ದ್ವಿತೀಯ), ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮುಡಿಪುವಿನ ಕುಶಿತ್ ಹಾಗೂ ಲೋಕೇಶ್ ರೈ (ತೃತೀಯ) ಬಹುಮಾನಗಳನ್ನು ಪಡೆದರು. ಕಾಲೇಜಿನ ಆಂಗ್ಲಭಾಷಾ ಸಹಾಯಕ ಪ್ರಾಧ್ಯಾಪಕ ನಂದಕಿಶೋರ್ ಎಸ್. ರಸಪ್ರಶ್ನೆ ಸ್ಪರ್ಧೆಗಳನ್ನು ನಡೆಸಿಕೊಟ್ಟರು.

      ಇದೇ ಸಂದರ್ಭ ಯುವ ಜಾಗೃತಿಎಂಬ ಹಾಡುಗಳ ಮೂಲಕ ಸಾಮಾಜಿಕ ಸಂದೇಶ ಬೀರುವ ವಿಶೇಷ ಕಾರ್ಯಕ್ರಮವನ್ನು ಶ್ರೀನಿವಾಸ ಪಾಠಶಾಲೆ ಮಂಗಳೂರಿನ ಶಿಕ್ಷಕ ಮುಕುಂದ ರೈ ನಡೆಸಿಕೊಟ್ಟರು. ಯುವ ಸಪ್ತಾಹ ಅಂಗವಾಗಿ ರಾಮಕೃಷ್ಣ ಮಠ ಮಂಗಳೂರಿನ ಸಹಭಾಗತ್ವದಲ್ಲಿ ಸ್ವಾಮಿ ವಿವೇಕಾನಂದರ ಕುರಿತಾದ ವಿಶೇಷ ಪುಸ್ತಕ ಪ್ರದರ್ಶನ ಹಾಗೂ ಮಾರಾಟವನ್ನು ಏರ್ಪಡಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲ ಡಾ. ಗಿರಿಧರ್ ರಾವ್, ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ ಮಣಿಯಾಣಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕಿ ಶುಭ ಕೆ.ಹೆಚ್. ಉಪಸ್ಥಿತರಿದ್ದರು. ಕಾವ್ಯಶ್ರೀ ನಿರೂಪಿಸಿರು. ತುಳಸಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News