ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Update: 2017-01-23 15:00 GMT

ಉಡುಪಿ, ಜ.23: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2016-17ನೇ ಸಾಲಿನ ವಿಶೇಷ ಘಟಕ ಯೋಜನೆ/ಗಿರಿಜನ ಉಪಯೋಜನೆ ಯಡಿಯಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಪ.ಜಾತಿ ಮತ್ತು ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡುವ ಯೋಜನೆುನ್ನು ಅನುಷ್ಠಾನಗೊಳಿಸಲಾಗುತ್ತಿದೆ.

  ಈ ಸಂಬಂಧ ಅರ್ಜಿಗಳನ್ನು ದೃಢೀಕೃತ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರಿಗೆ ಜ.31ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಡಾ. ರೋಶನ್ ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ (ದೂ.ಸಂ.: 2521324, 9480886467) ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News