ಜಿಮ್ ಸಲಕರಣೆ ವಿತರಣೆಗೆ ಅರ್ಜಿ ಆಹ್ವಾನ

Update: 2017-01-23 15:02 GMT

ಉಡುಪಿ, ಜ.23: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2016-17ನೇ ಸಾಲಿನ ವಿಶೇಷ ಘಟಕ ಯೋಜನೆ/ಗಿರಿಜನ ಉಪಯೋಜನೆ ಅಡಿಯಲ್ಲಿ ಪ.ಜಾತಿ ಮತ್ತು ಪಂಗಡದ ಜಿಮ್ ಸ್ಥಾಪಿಸಲು ಕ್ರಿಯಾಶೀಲ ವಾಗಿರುವ ಸಂಘ ಸಂಸ್ಥೆಗಳಿಗೆ ಜಿಮ್ ಸಲಕರಣೆ ಒದಗಿಸಲು 2 ಲಕ್ಷ ರೂ.ಗಳ ಸಹಾಯಧನವನ್ನು ಒದಗಿಸಲಾಗುತ್ತಿದೆ. ಇದಕ್ಕಾಗಿ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಈ ಸಂಬಂಧ ಅರ್ಜಿಗಳನ್ನು ದೃಡೀಕೃತ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರಿಗೆ ಜ.31ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಡಾ.ರೋಶನ್ ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ (ದೂ.ಸಂ.:2521324, 9480886467) ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News