ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ಕುರಿತು ಕಾರ್ಯಗಾರ

Update: 2017-01-23 17:12 GMT

ಮಂಗಳೂರು, ಜ.23: ಮಹಿಳಾ ಮತ್ತು ಮಕ್ಕಳ ದೌರ್ಜನ್ಯ /ಲಿಂಗ ತಾರತಮ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯಗಾರವು ಇತ್ತೀಚೆಗೆ ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿ ನಡೆಯಿತು.

ಬೆಂಗಳೂರು ಫ್ರೊಜೆಕ್ಟೃ್ ಟೀಮ್ನ ರುವಿನಾ ಹಾಗೂ ಗುರುರಾಜ್ ಸಂಪನ್ಮೂಲ ವ್ಯಕ್ತಿಯಾಗಿದ್ದರು. ನಗರದ ಪೊಲೀಸ್ ಕಮೀಷನರೇಟ್‌ವ್ಯಾಪ್ತಿಯ ಠಾಣೆಗಳ ಪೊಲೀಸ್ ನಿರೀಕ್ಷಕರು, ಉಪ ನಿರೀಕ್ಷಕರು, ಸಹಾಯಕ ಪೊಲೀಸ್ ಉಪನಿರೀಕ್ಷಕರು ಹಾಗೂ ಪೊಲೀಸ್ ಸಿಬ್ಬಂದಿ ವರ್ಗ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

  ಕಾರ್ಯಕ್ರಮದ ಯಶಸ್ವಿಗೆ ಕಮಿಷನರ್ ಚಂದ್ರಶೇಖರ ಎಂ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಶಾಂತರಾಜು ಹಾಗೂ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಡಾ. ಸಂಜೀವ ಎಂ ಪಾಟೀಲ ಮತ್ತು ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿ ವೆಲಂಟಿನ್ ಡಿಸೋಜ ಸಹಕರಿಸಿದ್ದರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News