​ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಡಿಸಿ ಕರೆ

Update: 2017-01-23 17:52 GMT


 ಕಾರವಾರ, ಜ.23: ಹದಿನೆಂಟು ವರ್ಷ ಪೂರ್ಣಗೊಂಡಿರುವ ಅರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.
ಮತದಾರರ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಕಾರವಾರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಜಾಪ್ರಭುತ್ವದ ಬುನಾದಿ ಯುವಜನತೆ ಕೈಯಲ್ಲಿದೆ. ದೇಶಕ್ಕೆ ಯಾವ ರೀತಿಯ ಆಡಳಿತಗಾರರು ಬೇಕು ಎಂಬುವದನ್ನು ನಿರ್ಧರಿಸುವವರು ಪ್ರಜೆಗಳು. ಮತದಾನದ ಮೂಲಕ ಆಡಳಿತ ವ್ಯವಸ್ಥೆಯನ್ನು ರೂಪಿಸುವ ಅವಕಾಶವನ್ನು ಸಂವಿಧಾನ ಕಲ್ಪಿಸಿದ್ದು, ಮತದಾನದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕಾಗಿದೆ.
ಇದರ ಮೊದಲ ಹಂತವಾಗಿ ಪ್ರತಿಯೊಬ್ಬ ಅರ್ಹ ವಿದ್ಯಾರ್ಥಿ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಅರ್ಜಿ ಸಲ್ಲಿಸಬೇಕಾಗಿದೆ.ಇದಕ್ಕಾಗಿ ನಿಗದಿತ ಅರ್ಜಿ ನಮೂನೆಗಳನ್ನು ಪಡೆದುಕೊಂಡು ಅದನ್ನು ತುಂಬಿಸಲು ವಿದ್ಯಾರ್ಥಿಗಳಿಗೆ ನೆರವು ನೀಡಬೇಕು. ನೀವೆಲ್ಲರೂ ಭವಿಷ್ಯದ ಮತದಾರರಾಗಿದ್ದು, ಪ್ರಜಾಪ್ರಭುತ್ವದ ಉಳಿವು ನಿಮ್ಮ ಕೈಯಲ್ಲಿದೆ. ಪ್ರತಿಯೊಂದು ಮತ ಅಮೂಲ್ಯವಾಗಿದ್ದು ದೇಶದ ಹಣೆಬರಹವನ್ನು ಬದಲಾಯಿಸಬಲ್ಲುದು ಎಂದರು.
 ಸ್ಪರ್ಧಾ ಕಾರ್ಯಕ್ರಮ: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಕಾರವಾರದ ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಪೈಂಟಿಂಗ್ ಮತ್ತು ಕ್ವಿಝ್ ಸ್ಪರ್ಧೆ ಆಯೋಜಿಸಲಾಯಿತು. ತಾಲೂಕು ಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲೆ ಡಾ.ಕಲ್ಪನಾ ಕೆರವಡಿಕರ್ ಮತ್ತಿತರರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News