×
Ad

ಜ.26ರಂದು ‘ಬ್ಯಾರಿ ವಾರ್ತೆ’ ಮಾಸಿಕ ಪತ್ರಿಕೆ ಬಿಡುಗಡೆ

Update: 2017-01-24 12:15 IST

ಮಂಗಳೂರು, ಜ.24:  ಬ್ಯಾರಿ ವಾರ್ತೆ ಮಾಸಿಕ ಪತ್ರಕೆ ಬಿಡುಗಡೆ ಸಮಾರಂಭವು ಜ.26ರಂದು ಸಂಜೆ ಗಂ. 4.30ಕ್ಕೆ ನಗರದ ಕಂಕನಾಡಿ ಬೈಪಾಸ್ ರಸ್ತೆಯಲ್ಲಿರುವ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಸಭಾಂಗಣದಲ್ಲಿ  ನಡೆಯಲಿದ್ದು, ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಸಂಪೂರ್ಣ ಬ್ಯಾರಿ ಭಾಷೆಯಲ್ಲಿ ಪ್ರಕಟವಾಗುವ ಪತ್ರಿಕೆಯನ್ನು ಬೆಂಗಳೂರು ಬ್ಯಾರೀಸ್ ಅಸೋಸಿಯೇಶನ್ ಅಧ್ಯಕ್ಷ ಬಿ.ಎಂ.ಫಾರೂಕ್ ಬಿಡುಗಡೆ ಮಾಡಲಿದ್ದಾರೆ. ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ ಅಬ್ದುಲ್ ರವೂಫ್ ಪುತ್ತಿಗೆ ಮೊದಲ ಪ್ರತಿ ಸ್ವೀಕರಿಸಲಿದ್ದಾರೆ.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್, ಕೇಂದ್ರ ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಎಂ. ಅಸ್ಲಂ, ಚಿಕ್ಕಮಗಳೂರು ಜಿಲ್ಲಾ ಬ್ಯಾರಿಗಳ ಒಕ್ಕೂಟದ ಅಧ್ಯಕ್ಷ ಕೆ.ಮುಹಮ್ಮದ್, ಅಖಿಲ ಭಾರತ ಬ್ಯಾರಿ ಪರಿಷತ್ ಅಧ್ಯಕ್ಷ ಅಬ್ದುಲ್ ಅಝೀರ್ ಬೈಕಂಪಾಡಿ, ಮೇಲ್ತೆನೆ ಅಧ್ಯಕ್ಷ ಆಲಿ ಕುಂಞಿ ಪಾರೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿ ಸಂಘದ ಅಧ್ಯಕ್ಷ ಮತ್ತು ಬ್ಯಾರಿ ವಾರ್ತೆ ಸಂಪಾದಕ ಬಶೀರ್ ಬೈಕಂಪಾಡಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಉಮರ್ ಯು. ಹೆಚ್. ಪ್ರಕಟಣೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News