×
Ad

ಕಂಬಳ ನಿಷೇಧದ ವಿರುದ್ಧ ಕಾನೂನು ಹೋರಾಟಕ್ಕೆ ನಿರ್ಧಾರ

Update: 2017-01-24 13:47 IST

ಮಂಗಳೂರು, ಜ.24: ತುಳುನಾಡಿನ ಜಾನಪದ ಕ್ರೀಡೆಯಾದ ಕಂಬಳದ ನಿಷೇಧದ ವಿರುದ್ಧ ಕಾನೂನು ಹೋರಾಟ ನಡೆಸಲು ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮಂಗಳವಾರ ಕುಂಟಿಕಾನ-ದೇರೇಬೈಲ್‌ನ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಜರಗಿದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಬುಧವಾರ ಮಂಗಳೂರಿಗೆ ಆಗಮಿಸುವ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸುವುದು, ಜ.28ರಂದು ಮೂಡುಬದಿರೆಯಲ್ಲಿ ನಡೆಯುವ ಕಂಬಳಕ್ಕೆ ಸಂಪೂರ್ಣ ಬೆಂಬಲ ನೀಡುವುದು, ಅದಕ್ಕೆ ಪೂರ್ವಭಾವಿಯಾಗಿ ಜ.27ರಂದು ಬೆಳಗ್ಗೆ 10ಕ್ಕೆ ನಗರದ ಹಂಪನಕಟ್ಟೆಯಲ್ಲಿ ಮಾನವ ಸರಪಳಿ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಸಭೆಯಲ್ಲಿ ಬಾಳೆಕೋಡಿ ಮಠದ ಶಶಿಕಾಂತ ಮಣಿ ಸ್ವಾಮೀಜಿ, ಮಾಜಿ ಸಚಿವ ನಾಗರಾಜ ಶೆಟ್ಟಿ, ಬಾರ್ಕೂರು ಶಾಂತರಾಮ ಶೆಟ್ಟಿ, ಡಾ. ಜೀವಂಧರ ಬಳ್ಳಾಲ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News