ಐಟಿ ದಾಳಿ ವರದಿ ಕೈ ಸೇರಿದ ಬಳಿಕ ಕ್ರಮ: ಸಿಎಂ ಸಿದ್ದರಾಮಯ್ಯ
Update: 2017-01-25 10:49 IST
ಮೈಸೂರು, ಜ.25: ಕಾಂಗ್ರೆಸ್ ಮುಖಂಡರ ಮನೆಯ ಮೇಲೆ ಐಟಿ ದಾಳಿಯ ಬಗ್ಗೆ ಮಾಹಿತಿ ಇಲ್ಲ. ಐಟಿ ಅಧಿಕಾರಿಗಳ ವರದಿ ಇನ್ನೂ ನಮ್ಮ ಕೈ ಸೇರಿಲ್ಲ. ವರದಿ ಪರಿಶೀಲನೆ ಮಾಡಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಐಟಿ ದಾಳಿಯ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.ನನಗೇನು ಈ ಬಗ್ಗೆ ಮಾಹಿತಿ ಇಲ್ಲ ಎಂದು ಅಭಿಪ್ರಾಯಪಟ್ಟರು.
ನಂಜನಗೂಡು ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿ ಕೊರತೆ ಇಲ್ಲ. ಚುನಾವಣೆಯ ದಿನಾಂಕ ಪ್ರಕಟಗೊಂಡ ಬಳಿಕ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಪ್ರಕಟಿಸಲಾಗುವುದು ಎಂದರು.
ರಾಜ್ಯ ಸಚಿವ ಸಂಪುಟದ ವಿಸ್ತರಣೆ ಸದ್ಯಕ್ಕಿಲ್ಲ ಎಂದು ಸಿಎಂ ಹೇಳಿದರು.