ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ
Update: 2017-01-25 14:56 IST
ಬಂಟ್ವಾಳ, ಜ.25: ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಕಾರ್ಯಕರ್ತರ ಸಭೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವಿಜೇತ ಅಭ್ಯರ್ಥಿಗಳಾದ ಪದ್ಮನಾಭ ರೈ, ಪದ್ಮರಾಜ್ ಬಲ್ಲಾಳ್, ಚಂದ್ರಶೇಖರ ಪೂಜಾರಿ, ಭಾರತಿ ರೈ, ಚಂದ್ರಶೇಖರ ರೈ, ದಿವಾಕರ ಪಂಬದಬೆಟ್ಟುರನ್ನು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸನ್ಮಾನಿಸಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ಎಂ.ಎಸ್.ಮುಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಮಾಜಿ ಜಿಪಂ ಸದಸ್ಯ ಎ.ಸಿ.ಭಂಡಾರಿ, ಬಂಟ್ವಾಳ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಬಂಗೇರಾ ಮತ್ತಿತರರು ಉಪಸ್ಥಿತರಿದ್ದರು.