ದ.ಕ.ಜಿಲ್ಲೆಯ ಐವರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ
Update: 2017-01-25 22:39 IST
ಮಂಗಳೂರು, ಜ.25: ರಾಜ್ಯ ಸರಕಾರದ ನಾಗರಿಕ ಸೇವಾ ವೃಂದದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಜಿಲ್ಲೆಯ ಐವರು ಅಧಿಕಾರಿ/ಸಿಬ್ಬಂದಿಯನ್ನು ದ.ಕ.ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕಿ ಡಾ. ಎಚ್.ಎಸ್.ರಾಜೇಶ್ವರಿ ದೇವಿ, ಬಂಟ್ವಾಳ ತಾಲೂಕು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಕೆ.ಪಿ.ಗಿರೀಶ್ ಗೌಡ, ಸುರತ್ಕಲ್ ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ಅಧಿಕಾರಿ ಅಬ್ದುಲ್ ಬಶೀರ್, ಬೆಳ್ತಂಗಡಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ, ಇಡ್ಕಿದು ಗ್ರಾಪಂ ಗ್ರೇಡ್ 1 ಕಾರ್ಯದರ್ಶಿ ಗೋಕುಲದಾಸ ಭಕ್ತ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಜ.26ರಂದು ನಗರದ ನೆಹರೂ ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.