×
Ad

ಮತದಾನದಲ್ಲಿ ಪಾಲ್ಗೊಳ್ಳಿ , ಪ್ರಜಾಪ್ರಭುತ್ವ ಯಶಸ್ವಿಗೊಳಿಸಿ : ಟಿ ವೆಂಕಟೇಶ್

Update: 2017-01-25 23:45 IST

ಉಡುಪಿ, ಜ.25: ದೇಶದ ಯುವಜನತೆ ಮತದಾನದ ಹಕ್ಕಿನ ಬಗ್ಗೆ ಜಾಗೃತ ರಾಗಬೇಕು. ಇತರರಲ್ಲೂ ಅರಿವು ಮೂಡಿಸಬೇಕು. ಪ್ರತಿಯೊಬ್ಬರು ಮತದಾನ ದಲ್ಲಿ ಪಾಲ್ಗೊಳ್ಳುವ ಮೂಲಕ ಮಾತ್ರ ಪ್ರಜಾಪ್ರುತ್ವವ್ಯವಸ್ಥೆಯನ್ನುಬಲಪಡಿಸಲುಸ್ಯಾ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಟಿ ವೆಂಕಟೇಶ್ ಹೇಳಿದ್ದಾರೆ.

ಬುಧವಾರ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ದೇಶದಲ್ಲಿ ನಡೆದ ಸರಾಸರಿ ಮತದಾನವನ್ನು ಪರಿಶೀಲಿಸಿದಾಗ ಮತದಾನದ ಹಕ್ಕಿನ ಬಗ್ಗೆ ನಮ್ಮಲ್ಲಿ ಇನ್ನಷ್ಟು ಅರಿವು ಮೂಡಿಸಬೇಕಾದ ಅಗತ್ಯತೆ ಕಂಡುಬರುತ್ತದೆ ಎಂದ ವೆಂಕಟೇಶ್, ದೇಶದ ಕಟ್ಟಕಡೆಯ ವ್ಯಕ್ತಿಗೂ ದೊರಕಿರುವ ಸಮಾನ ಅವಕಾಶ ಇದಾಗಿದೆ ಎಂದರು.

ಮುಖ್ಯ ಅತಿಥಿಯಾಗಿದ್ದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವೆಂಕಟೇಶ ನಾಯ್ಕಾ ಟಿ. ಮತದಾರರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಮತದಾರರ ದಿನಾಚರಣೆಗಳು ಗರಿಷ್ಠ ಮತದಾನಕ್ಕೆ ಪ್ರೇರಣೆಯಾಗಲಿ, ಮತದಾನದ ಮೂಲಕ ಪ್ರಜೆಗಳು ಪ್ರಜಾಪ್ರುತ್ವ ವ್ಯವಸ್ಥೆಯನ್ನು ಎತ್ತಿಹಿಡಿಯಲು ಸಾಧ್ಯ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಲತಾ, ಸಿಇಒ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ನೂತನ ಮತದಾರರಿಗೆ ಎಪಿಕ್ ಕಾರ್ಡ್ ವಿತರಿಸಲಾಯಿತು. ಮತದಾನ ಸಂಬಂಧ ಆಯೋಜಿಸಲಾದ ಪ್ರಬಂಧ ಮತ್ತು ಚರ್ಚಾ ಸ್ಪರ್ಧೆಗಳ ವಿಜೇತ ವಿದ್ಯಾಥಿಗರ್ಳಿಗೆ ಬಹುಮಾನ ವಿತರಿಸಲಾಯಿತು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಲತಾ, ಸಿಇಒ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ನೂತನ ಮತದಾರರಿಗೆ ಎಪಿಕ್‌ಕಾರ್ಡ್‌ ವಿತರಿಸಲಾಯಿತು. ಮತದಾನ ಸಂಬಂಧ ಆಯೋಜಿಸಲಾದ ಪ್ರಬಂಧ ಮತ್ತು ಚರ್ಚಾಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಅನುರಾಧ ಜಿ ಸ್ವಾಗತಿಸಿದರು. ತಹಶೀಲ್ದಾರ್ ಮಹೇಶ್ಚಂದ್ರ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News