ಗಣರಾಜ್ಯೋತ್ಸವದ ಸಂಭ್ರಮಾಚರಣೆಗೆ ವರ್ಣರಂಜಿತ ತೆರೆ
Update: 2017-01-26 12:08 IST
ಹೊಸದಿಲ್ಲಿ, ಜ.26:ರಾಜಧಾನಿ ಹೊಸದಿಲ್ಲಿಯಲ್ಲಿ ನಡೆದ 68ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ರಾಷ್ಟ್ರಗೀತೆಯನ್ನು ಹಾಡುವ ಮೂಲಕ ಕೊನೆಗೊಂಡಿತು.
ಗಣರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಹಾಗೂ ಮುಖ್ಯ ಅತಿಥಿಯಾಗಿದ್ದ ಶೇಖ್ ಮೊಹಮ್ಮದ್ ಬಿನ್ ಜಾಯೇದ್ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆತ್ಮೀಯ ಬೀಳ್ಕೊಡುಗೆ ನೀಡಿದರು.