×
Ad

ಹಾಲಿನ ಪ್ರೋತ್ಸಾಹ ಧನ ಹೆಚ್ಚಳ: ಸಿದ್ದರಾಮಯ್ಯ

Update: 2017-01-26 19:12 IST

ಬೆಂಗಳೂರು, ಜ.26: ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಪ್ರತಿ ಲೀಟರ್ ಹಾಲಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು 4 ರಿಂದ 5 ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಗುರುವಾರ 68ನೆ ಗಣರಾಜ್ಯೋತ್ಸವದ ಅಂಗವಾಗಿ ದೂರದರ್ಶನದ ಮೂಲಕ ನಾಡಿನ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಾಲಿನ ಪ್ರೋತ್ಸಾಹ ಧನ ಹೆಚ್ಚಳ ಮಾಡುವುದರಿಂದ 8.61 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದರು.

ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಬರಗಾಲವಿದೆ. ರಾಜ್ಯ ಸರಕಾರವು ಬರಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿದೆ. ಕಳೆದ ಮೂರು ವರ್ಷಗಳಲ್ಲಿ ರೈತರಿಗೆ ನೀಡುತ್ತಿರುವ ಸಾಲದ ಪ್ರಮಾಣ ಶೇ.50ರಷ್ಟು ಹೆಚ್ಚಾಗಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News