ಬ್ಯಾಟರಿ ಕಳವು : ಆರೋಪಿಯ ಬಂಧನ
Update: 2017-01-26 22:42 IST
ಮಂಗಳೂರು, ಜ. 26 : ಟಿಪ್ಪರ್ ಲಾರಿಯೊಂದರಿಂದ ಬ್ಯಾಟರಿಯನ್ನು ಕಳವು ಮಾಡಿ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಬರ್ಕೆ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮೂಡಬಿದ್ರೆಯ ಹರೀಶ್ ಪೂಜಾರಿ (38) ಎಂದು ಗುರುತಿಸಲಾಗಿದೆ.
ಈತ ನಗರದ ಸಬ್‌ಜೈಲ್ ಬಳಿ ದ್ವಿಚಕ್ರ ವಾಹನದಲ್ಲಿ ಎರಡು ಬ್ಯಾಟರಿಗಳಿಟ್ಟು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಹಿನ್ನೆಲೆಯಲ್ಲಿ ರೌಂಡ್ಸ್‌ನಲ್ಲಿದ್ದ ಬರ್ಕೆ ಠಾಣಾ ಹೆಡ್‌ಕಾನ್‌ಸ್ಟೇಬಲ್ ಗಣೇಶ್ ಮತ್ತು ಇತರ ಸಿಬ್ಬಂದಿಗಳು ಆತನನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಈ ಸಂದರ್ಭದಲ್ಲಿ ಆತ ಯೆಯ್ಯಾಡಿಯಲ್ಲಿ ಟಿಪ್ಪರ್ ಲಾರಿಯೊಂದರಿಂದ ಬ್ಯಾಟರಿಯನ್ನು ಕಳವುಗೈದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.