×
Ad

ಅಕ್ರಮ ಮರಳು ಸಾಗಾಟ: ಆರೋಪಿ ಸೆರೆ

Update: 2017-01-26 22:54 IST

ಮಂಗಳೂರು, ಜ. 26: ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಓರ್ವನನ್ನು ಲಾರಿ ಸಮೇತ ಪಾಂಡೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಲಾರಿ ಚಾಲಕ ಬಂಟ್ವಾಳದ ಉದಯ್ ಎಂಬಾತ ಬಂಧಿತ ವ್ಯಕ್ತಿ.

ಈತ ಲಾರಿಯಲ್ಲಿ ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಮಂಗಳಾದೇವಿ ಸಮೀಪ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಯಾವುದೇ ಅಧಿಕೃತ ದಾಖಲೆ ಪತ್ರಗಳು ಇಲ್ಲದಿದ್ದುದರಿಂದ ಆತನನ್ನು ಬಂಧಿಸಿ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.

ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News