ಬೆಳ್ತಂಗಡಿ- ಪರಾರಿಯಲ್ಲಿ ದಂಪತಿ ಆತ್ಮಹತ್ಯೆಗೆ ಯತ್ನ: ಪತಿ ಸಾವು
Update: 2017-01-27 16:21 IST
ಉಪ್ಪಿನಂಗಡಿ, ಜ.27: ಪತಿ-ಪತ್ನಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೃತಪಟ್ಟ ಘಟನೆ ಇಲ್ಲಿನ ಮುಗೇರಡ್ಕ ಸಮೀಪದ ಪರಾರಿ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.ಘಟನೆಯಲ್ಲಿ ಪತ್ನಿ ಗಂಭೀರ ಸ್ಥಿತಿಯಲ್ಲಿದ್ದು, ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಇಲ್ಲಿನ ನಿವಾಸಿಗಳಾದ ಮೋಹನ್ ದಾಸ್(30) ಎಂದು ಗುರುತಿಸಲಾಗಿದೆ. ಅವರ ಪತ್ನಿ ಲಕ್ಷೀ(27) ಗಂಭೀರ ಸ್ಥಿತಿಯಲ್ಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪತಿ-ಪತ್ನಿ ಅನ್ಯೋನ್ಯವಾಗಿಯೇ ಇದ್ದರೆನ್ನಲಾಗಿದೆ. ಆತ್ಮಹತ್ಯೆ ಕೃತ್ಯಕ್ಕೆ ಕಾರಣ ಏನು ಎಂದು ಇನ್ನೂ ಸ್ಪಷ್ಟಗೊಂಡಿಲ್ಲ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.