×
Ad

ಕನ್ನಡ ಸಾಹಿತ್ಯ ವೌನವೀಯ ವೌಲ್ಯಗಳಿಂದ ಸಮೃದ್ಧ: ಅಬೂ ಸುಫ್ಯಾನ್

Update: 2017-01-27 16:51 IST

ಬೆಳ್ತಂಗಡಿ, ಜ.27: ಕನ್ನಡ ಸಾಹಿತ್ಯದ ಸಮೃದ್ಧ ಪರಂಪರೆಯೊಂದಿಗೆ ಮಾನವೀಯ ಮೌಲ್ಯಗಳನ್ನೂ ತನ್ನದಾಗಿಸಿಕೊಂಡು ಬೆಳೆದು ಬಂದಿದ್ದು ಕನ್ನಡ ಸಾಹಿತ್ಯಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿ ಮನ್ನಣೆ ಲಭಿಸಿರುವುದು ಹೆಮ್ಮೆಯ ಸಂಗತಿ ಎಂದು ಉಜಿರೆಯ ಜುಮಾ ಮಸೀದಿಯ ಮುಖ್ಯ ಗುರು ಅಬೂ ಸುಫ್ಯಾನ್ ಎಚ್.ಐ.ಇಬ್ರಾಹೀಂ ಮದನಿ ಹೇಳಿದರು.

ಉಜಿರೆಯಲ್ಲಿ ಶುಕ್ರವಾರ ಆರಂಭಗೊಂಡ 21ನೆ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದ ಧ್ವಜಾರೋಹಣ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.

ಕನ್ನಡದ ನೆಲದಲ್ಲಿ ಬಸವಣ್ಣ, ಸಂತ ಶಿಶುನಾಳ ಷರೀಫ, ಕನಕದಾಸರಂಥ ದಾರ್ಶನಿಕರು ಆಗಿಹೋಗಿದ್ದಾರೆ. ಅವರು ನೀಡಿದ ವೈಚಾರಿಕ ಕಾಣಿಕೆಗಳನ್ನು ನೆನಪಿಸಿಕೊಂಡು ಯುವ ಪೀಳಿಗೆಗೆ ಮಾನವೀಯ ಮೌಲ್ಯಗಳ ಮಹತ್ವವನ್ನು ಮನವರಿಕೆ ಮಾಡಿಕೊಡುವ ಕೆಲಸ ಆಗಬೇಕು ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್ ಮಾತನಾಡಿ, ವಿಭಿನ್ನ ಸಂಸ್ಕೃತಿಯೊಂದಿಗೆ ಗುರುತಿಸಿಕೊಂಡಿರುವ ಭಾರತದ ಕುರಿತು ಹೆಮ್ಮೆ ಮೂಡಿಸುವ ನಿಟ್ಟಿನಲ್ಲಿ ಸಾಹಿತ್ಯ ಸಮ್ಮೇಳನಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.

ಉಜಿರೆ ಗ್ರಾಪಂ ಅಧ್ಯಕ್ಷ ಕೆ.ಶ್ರೀಧರ ಪೂಜಾರಿ ರಾಷ್ಟ್ರ ಧ್ವಜಾರೋಹಣ ಹಾಗೂ ಪರಿಷತ್‌ನ ಧ್ವಜಾರೋಹಣವನ್ನು ದ.ಕ. ಜಿಲ್ಲಾ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಎಸ್. ಪ್ರದೀಪ ಕುಮಾರ್ ಕಲ್ಕೂರ ನೆರವೇರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News