ದ.ಕ. ಜಿಲ್ಲಾ ಸಾಹಿತ್ಯ ಸಮ್ಮೇಳನ: ಮಾಧ್ಯಮ ಕೇಂದ್ರ ಉದ್ಘಾಟನೆ
ಬೆಳ್ತಂಗಡಿ, ಜ.27: ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗೆ ಪೂರಕವಾಗುವ ಸಮ್ಮೇಳನಗಳ ಆಶಯಗಳನ್ನು ಪ್ರಚುರಪಡಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರವಹಿಸುತ್ತವೆ ಎಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ದೇವಿಪ್ರಸಾದ್ ಅಭಿಪ್ರಾಯಪಟ್ಟರು.
ಉಜಿರೆಯ ಶ್ರೀ ಜನಾರ್ದನಸ್ವಾಮಿ ದೇವಸ್ಥಾನದ ಪ್ರಾಂಗಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 21ನೆ ದ.ಕ. ಜಿಲ್ಲಾ ಸಾಹಿತ್ಯ ಸಮ್ಮೇಳನದ ಮಾಧ್ಯಮ ಕೇಂದ್ರಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ವಿಜಯರಾಘವ ಪಡ್ವೆಟ್ನಾಯ, ಕನ್ನಡ ಸಾಹಿತ್ಯ ಪರಿಷತ್ತಿನ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಡಾ.ಬಿ.ಯಶೋವರ್ಮ, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಪ್ರದೀಪ್‌ಕುಮಾರ ಕಲ್ಕೂರ, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಪ್ರತಾಪ ಸಿಂಹ ನಾಯಕ್, ವಿಧಾನ ಪರಿಷತ್ತಿನ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಗೌರವ ಕಾರ್ಯದರ್ಶಿ ಡಾ.ಎಂ.ಪಿ.ಶ್ರೀನಾಥ್, ಎಸ್.ಡಿ.ಎಂ. ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಭಾಸ್ಕರ್ ಹೆಗ್ಡೆ ಹಾಗೂ ಇತರರು ಉಪಸ್ಥಿತರಿದ್ದರು.