ರೈತರ ಆತ್ಮಹತ್ಯೆ ಪ್ರಕರಣ : ಸರಕಾರದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್
Update: 2017-01-27 19:52 IST
ಹೊಸದಿಲ್ಲಿ, ಜ.27: ರೈತರ ಆತ್ಮಹತ್ಯೆ ಪ್ರಕರಣಗಳ ಕುರಿತು ನಾಲ್ಕು ವಾರದೊಳಗೆ ಉತ್ತರಿಸುವಂತೆ ಕೇಂದ್ರ ಮತ್ತು ರಾಜ್ಯ ಸರಕಾರಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ರಿಸರ್ವ್ ಬ್ಯಾಂಕ್‌ಗೆ ಸುಪ್ರೀಂಕೋರ್ಟ್ ತಿಳಿಸಿದೆ.
ದೇಶದಾದ್ಯಂತ ನಡೆಯುತ್ತಿರುವ ರೈತರ ಆತ್ಮಹತ್ಯೆ ಪ್ರಕರಣ ಸಾರ್ವಜನಿಕ ಹಿತಾಸಕ್ತಿಯ ಅತ್ಯಂತ ಸೂಕ್ಷ್ಮ ವಿಷಯವಾಗಿದ್ದು ಆತ್ಮಹತ್ಯೆಯ ಹಿಂದಿರುವ ಕಾರಣದ ಬಗ್ಗೆ ಪರಿಶೀಲಿಸಿ ಉತ್ತರಿಸುವಂತೆ ನ್ಯಾಯಮೂರ್ತಿಗಳಾದ ಜೆ.ಎಸ್.ಖೇಹರ್ ಮತ್ತು ಎನ್.ವಿ.ರಮಣ ಅವರನ್ನೊಳಗೊಂಡ ವಿಭಾಗೀಯ ಪೀಠ ತಿಳಿಸಿದೆ. ರೈತರ ಆತ್ಮಹತ್ಯೆ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಎನ್‌ಜಿಒ ಸಂಸ್ಥೆಯೊಂದು ಸುಪ್ರೀಂಕೋರ್ಟ್‌ನಲ್ಲಿ ಸರ್ಜಿ ಸಲ್ಲಿಸಿತ್ತು.