×
Ad

ಮಾಜಿ ಲೋಕಾಯುಕ್ತ ನ್ಯಾ. ಭಾಸ್ಕರ ರಾವ್‌ಗೆ ಜಾಮೀನು

Update: 2017-01-28 12:10 IST

ಬೆಂಗಲೂರು, ಜ.28: ಲೋಕಾಯುಕ್ತ ಸಂಸ್ಥೆಯಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಲೋಕಾಯುಕ್ತ ವಿಶೇಷ ಕೋರ್ಟ್ ಮಾಜಿ ಲೋಕಾಯುಕ್ತ ನ್ಯಾ. ಭಾಸ್ಕರ ರಾವ್‌ಗೆ ಜಾಮೀನು ಮಂಜೂರು ಮಾಡಿದೆ.

ಸಾಕ್ಷಗಳ ನಾಶಕ್ಕೆ ಯತ್ನಿಸಬಾರದು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಎಂದು ಷರತ್ತು ವಿಧಿಸಿರುವ ನ್ಯಾಯಾಲಯ 1 ಲಕ್ಷ ಮೊತ್ತದ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ಮೇಲೆ ಜಾಮೀನು ನೀಡಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ನ್ಯಾ.ರಾವ್ ಕೋರ್ಟಿಗೆ ಗೈರು ಹಾಜರಾಗಿದ್ದರು. ಎಸ್‌ಐಟಿ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News