ಫೆ.3: ಬಿಸಿಸಿಐನಿಂದ ಉದ್ಯಮಶೀಲತೆ ಕಾರ್ಯಾಗಾರ
Update: 2017-01-28 17:17 IST
ಮಂಗಳೂರು, ಜ.28: ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ (ಬಿಸಿಸಿಐ) ವತಿಯಿಂದ ವ್ಯಾಪಾರ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಕುರಿತು ಫೆ.3ರಂದು ಸಂಜೆ 6:45ಕ್ಕೆ ನಗರದ ಅತ್ತಾವರ ರಸ್ತೆಯ ಐಎಂಎ ಸಭಾಂಗಣದಲ್ಲಿ ಕಾರ್ಯಾಗಾರ ನಡೆಯಲಿದೆ.
ಬಿಸಿಸಿಐ ಅಧ್ಯಕ್ಷ ಎಸ್.ಎಂ.ರಶೀದ್ ಅಧ್ಯಕ್ಷತೆ ವಹಿಸಲಿದ್ದು, ಮನಪಾ ಆಯುಕ್ತ ಮುಹಮ್ಮದ್ ನಝೀರ್ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ನಿವೃತ್ತ ಜಂಟಿ ನಿರ್ದೇಶಕ ಎಸ್.ಜಿ.ಹೆಗಡೆ ಮತ್ತು ಲೆಕ್ಕಪರಿಶೋಧಕ ನಿತಿನ್ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ....